ಕರ್ನಾಟಕ

karnataka

ETV Bharat / state

ಬಸವಕಲ್ಯಾಣ: ಆಶಾ ಕಾರ್ಯಕರ್ತೆಯರ ಪ್ರತಿಭಟನೆ - Corona warriors protest

ಮಾಸಿಕ ಗೌರವ ಧನ 12 ಸಾವಿರ ರೂಪಾಯಿಗಳಿಗೆ ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಗರದ ಗಾಂಧಿ ವೃತ್ತದಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.

ASHA_worker_protests
ಆಶಾ ಕಾರ್ಯಕರ್ತೆಯರ ಪ್ರತಿಭಟನೆ

By

Published : Jul 13, 2020, 10:00 PM IST

ಬಸವಕಲ್ಯಾಣ:ಮಾಸಿಕ ಗೌರವ ಧನ 12 ಸಾವಿರ ರೂಪಾಯಿಗಳಿಗೆ ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಗರದ ಗಾಂಧಿ ವೃತ್ತದಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು. ಅಲ್ಲಿಂದ ತಾಲೂಕು ಪಂಚಾಯಿತಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಿ, ತಾಪಂ ಕಚೇರಿ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.

ಕೊರೊನಾ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯೊಂದಿಗೆ ಆಶಾ ಕಾರ್ಯಕರ್ತೆಯರು ಜೀವದ ಹಂಗು ತೊರೆದು ಹಗಲಿರುಳು ಶ್ರಮಿಸುತ್ತಿದ್ದಾರೆ. ಆದರೆ, ನಮಗೆ ಸರ್ಕಾರದಿಂದ ಯಾವುದೇ ಸುರಕ್ಷತಾ ಪರಿಕರಗಳನ್ನು ನೀಡಿಲ್ಲ ಎಂದು ದೂರಿದರು.

ಪ್ರತಿಭಟನೆ ನಡೆಸಿದ ಆಶಾ ಕಾರ್ಯಕರ್ತೆಯರು

ಮಾಸಿಕ ಗೌರವ ಧನ 12 ಸಾವಿರ ರೂ. ನೀಡಬೇಕು. ಮಾಸ್ಕ್, ಸ್ಯಾನಿಟೈಸರ್, ಗ್ಲೌಸ್​​​​​​ ಸೇರಿದಂತೆ ಅಗತ್ಯ ಸುರಕ್ಷತಾ ವಸ್ತುಗಳನ್ನು ಸರ್ಕಾರದಿಂದಲೇ ಸರಬರಾಜು ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ABOUT THE AUTHOR

...view details