ಬೀದರ್: ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಗೃಹಿಣಿಯೊಬ್ಬರ ಶವ ಪತ್ತೆಯಾಗಿದ್ದು, ಆಕೆಯ ಕುಟುಂಬಸ್ಥರು ವರದಕ್ಷಿಣೆಗಾಗಿ ಪತಿ ಮನೆಯವರು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ : ವರದಕ್ಷಿಣೆಗಾಗಿ ಕೊಲೆ ಶಂಕೆ...! - kannadanews
ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಗೃಹಿಣಿಯೊಬ್ಬರ ಶವ ಪತ್ತೆಯಾಗಿದ್ದು,ಮೃತರ ಕುಟುಂಬಸ್ಥರು ಕೊಲೆ ಶಂಕೆ ವ್ಯಕ್ತಪಡಿಸಿರುವ ಘಟನೆ ನಗರದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ
ನಗರದ ರಾಂಪೂರೆ ಕಾಲೋನಿಯಲ್ಲಿ ಪ್ರವೀಣ ಎಂಬಾತನ ಪತ್ನಿ ನರ್ಮದಾ ಎಂಬುವವರ ಮೃತದೇಹ ಪತ್ತೆಯಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಸೇವೆಯಲ್ಲಿರುವ ಪ್ರವೀಣ ಹಲವು ದಿನಗಳಿಂದ ವರದಕ್ಷಿಣೆಗಾಗಿ ಕಿರುಕುಳ ನೀಡ್ತಿದ್ದ ಎಂದು ಆರೋಪಿಸಿರುವ ಮೃತ ನರ್ಮದಾ ಮನೆಯವರು, ಮನೆಯಲ್ಲಿ ಯಾರು ಇಲ್ಲದಾಗ ನಮ್ಮ ಮಗಳನ್ನ ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ನೇತು ಹಾಕಲಾಗಿದೆ ಎಂದು ಆರೋಪಿಸಿದ್ದಾರೆ.
ಗಂಡ ಪ್ರವೀಣ ಹಾಗೂ ಆತನ ತಾಯಿ ಮನೆಯಿಂದ ಪರಾರಿಯಾಗಿದ್ದು, ಈ ಕುರಿತು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.