ಬಸವಕಲ್ಯಾಣ: ಮದ್ಯದ ಅಮಲಿನಲಿದ್ದ ಕ್ರೂಸರ್ ವಾಹನ ಚಾಲಕನೊಬ್ಬ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಶಿವಾಜಿ ಪಾರ್ಕ್ ಸಮೀಪ ನಡೆದಿದೆ.
ಮದ್ಯದ ಅಮಲಿನಲ್ಲಿ ಬೈಕ್ಗೆ ಗುದ್ದಿದ ಕ್ರೂಸರ್ ಚಾಲಕ: ಬೈಕ್ ಸವಾರನಿಗೆ ಗಂಭೀರ ಗಾಯ
ಮದ್ಯದ ಅಮಲಿನಲಿದ್ದ ಕ್ರೂಸರ್ ವಾಹನ ಚಾಲಕ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಬಸವಕಲ್ಯಾಣದಲ್ಲಿ ಈ ಘಟನೆ ನಡೆದಿದೆ.
ಬೇಲೂರ ಗ್ರಾಮದ ತೇಜಪ್ಪ ಕಾಮಣ್ಣ (22) ಗಾಯಗೊಂಡ ಯುವಕ. ನಗರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಹಾರಾಷ್ಟ್ರದ ಉಮರ್ಗಾ ಆಸ್ಪತ್ರೆಗೆ ಕಳುಹಿಸಲಾಗಿದೆ. ನಗರದ ಮುಖ್ಯರಸ್ತೆಯಲ್ಲಿ ಬೈಕ್ನಲ್ಲಿ ಬರುತಿದ್ದಾಗ ಎದುರಿಗೆ ಬಂದ ಕ್ರೂಸರ್ ವಾಹನ ಡಿಕ್ಕಿಯಾಗಿ ಘಟನೆ ಸಂಭವಿಸಿದೆ. ಕ್ರೂಸರ್ ವಾಹನ ಚಾಲಕ ಮದ್ಯಪಾನ ಮಾಡಿ ವಾಹನ ಚಲಾಯಿಸಿದ್ದೆ ಈ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ. ಘಟನೆ ನಂತರ ಸ್ಥಳದಿಂದ ತಪ್ಪಿಸಿಕೊಂಡು ಹೋಗಲು ಯತ್ನಿಸಿದ ಚಾಲಕನನ್ನು ಸಾರ್ವಜನಿಕರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಚಾಲಕ ಹಾಗೂ ಕ್ರೂಸರ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದು, ತನಿಖೆ ಮುಂದುವರೆಸಿದ್ದಾರೆ.