ಬೀದರ್:ಕಳೆದೆರಡು ದಿನಗಳಲ್ಲಿ ಜಿಲ್ಲೆಯಾದ್ಯಂತ ಸುರಿದ ಧಾರಾಕಾರ ಮಳೆಯಿಂದ ಹಾನಿಯಾದ ಪ್ರದೇಶಗಳ ಸಮಗ್ರ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ರಾಮಚಂದ್ರನ್. ಆರ್ ಅವರು ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬೀದರ್ ನಲ್ಲಿ ಮಳೆ ಹಾನಿಯ ಸಮಗ್ರ ವರದಿ ಸಲ್ಲಿಸಲು ಒಂದು ವಾರದ ಗಡುವು : ಜಿಲ್ಲಾಧಿಕಾರಿ
ಜಿಲ್ಲೆಯಲ್ಲಿ ಕಳೆದೆರಡು ದಿನಗಳ ಹಿಂದೆ ಸುರಿದ ಮಳೆಯಿಂದ ಉಂಟಾಗಿರುವ ಹಾನಿ ಕುರಿತು ಸಮಗ್ರ ವದರಿ ಸಲ್ಲಿಸಲು ಡಿಸಿ ಅಧಿಕಾರಿಗಳಿಗೆ ಒಂದು ವಾರದ ಗಡುವು ನೀಡಿ ಸೂಚಿಸಿದ್ದಾರೆ.
ಈ ಕುರಿತು ಈಗಾಗಲೆ ಜಿಲ್ಲೆಯ ಐದು ತಾಲೂಕುಗಳನ್ನು ಅತಿವೃಷ್ಠಿ ಪಿಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ. ಅಲ್ಲದೆ ಹೆಚ್ಚುವರಿ ಮಳೆಯಾದ ಹಿನ್ನೆಲೆಯಲ್ಲಿ ರೈತರ ಬೆಳೆಗಳು ನಾಶವಾಗಿದ್ದು, ಎಸ್ ಡಿಆರ್ ಎಫ್ / ಎಸ್ ಡಿಆರ್ ಎಫ್ ಮಾರ್ಗಸೂಚಿಯಂತೆ ಕೃಷಿ, ತೋಟಗಾರಿಕೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಸಮಿಕ್ಷೆ ನಡೆಸಿ ವರದಿ ಸಲ್ಲಿಸಲು ಒಂದು ವಾರಡ ಗಡುವು ನೀಡಿದ್ದಾರೆ.
ಅಲ್ಲದೆ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಅವರು ಆದೇಶ ಹೊರಡಿಸಿ ಜಿಲ್ಲೆಯಲ್ಲಾದ ಮಳೆಯಿಂದ ಕೆರೆ, ಹಳ್ಳ ಹಾಗೂ ನದಿಗಳು ತುಂಬಿಕೊಂಡು ಗ್ರಾಮಗಳ ಸಂಪರ್ಕ ಕಡಿತಗೊಳ್ಳುವ ಹಾಗೂ ಮೂಲಭೂತ ಸೌಕರ್ಯಗಳ ಹಾನಿಯಾಗುವ ಸಂಭವವಿದ್ದು ನಗರ ಹಾಗೂ ಗ್ರಾಮಿಣ ಭಾಗದಲ್ಲಿ ಹಾನಿಯಾದ ವರದಿ ಸಲ್ಲಿಸಲು ಸೂಚನೆ ನೀಡಿದ್ದಾರೆ.