ಬೀದರ್: ಕೊವಿಡ್-19 ವೈರಾಣು ಸೋಂಕಿಗೆ ಒಳಗಾಗಿ ಬ್ರಿಮ್ಸ್ ಆಸ್ಪತ್ರೆಯ ವಿಶೇಷ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರನ್ನು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಪಿಪಿಇ ಕಿಟ್ ಧರಿಸಿದ ಜಿಲ್ಲಾಧಿಕಾರಿ ರಾಮಚಂದ್ರನ್ ಅವರು, ಬ್ರಿಮ್ಸ್ ಆಸ್ಪತ್ರೆಯ ಕೊರೊನಾ ವಾರ್ಡ್‌ಗೆ ಭೇಟಿ ನೀಡಿ ಹಲವಾರು ವ್ಯವಸ್ಥೆಗಳನ್ನು ಖುದ್ದು ಪರಿಶೀಲಿಸಿ ಮಾಹಿತಿ ಪಡೆದರು.
ಬ್ರೀಮ್ಸ್ ಆಸ್ಪತ್ರೆಯ ಕೊರೊನಾ ವಾರ್ಡ್‌ಗೆ ಜಿಲ್ಲಾಧಿಕಾರಿ ಭೇಟಿ ಐಸಿಯು-01 ಹಾಗೂ ಐಸಿಯು-02 ವಾರ್ಡ್‌ಗಳಲ್ಲಿ ಸಂಚರಿಸಿ ಸೋಂಕಿತರ ಯೋಗಕ್ಷೇಮ ವಿಚಾರಿಸಿದರು. ಚಿಕಿತ್ಸೆ, ಆರೈಕೆ ಚೆನ್ನಾಗಿದೆ ಎಂದು ಕೈ ಸನ್ನೆಯೊಂದಿಗೆ ಕೆಲ ಸೋಂಕಿತರು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.
ಬ್ರಿಮ್ಸ್ ನಿರ್ದೇಶಕ ಡಾ. ಶಿವಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ರತಿಕಾಂತ ಸ್ವಾಮಿ, ವೈದ್ಯಕೀಯ ಅಧೀಕ್ಷಕ ಡಾ. ವಿಜಯಕುಮಾರ್ ಅಂತೆಪ್ಪನವರ ಜಿಲ್ಲಾಧಿಕಾರಿಗಳಿಗೆ ಸಾಥ್ ನೀಡಿದರು.