ಬಸವಕಲ್ಯಾಣ: ಮುಂಬರುವ ಕೆಲವೇ ದಿನಗಳಲ್ಲಿ ನಡೆಯಲಿರುವ ಕ್ಷೇತ್ರದ ಉಪ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸುವುದು ನಿಶ್ಚಿತವಾಗಿದೆ. ಬಿಜೆಪಿ ಗೆಲವು ತಡೆಯಲು ಯಾರಿಂದಲು ಸಾಧ್ಯವಿಲ್ಲ. ಕನಕಪುರದ ಬಂಡೆ ಬರಲಿ ಅಥವಾ ಮತ್ಯಾರೆ ಬಂದರು ಅವರ ಆಟ ನಡೆಯಲ್ಲ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.
ನಗರದ ಶ್ರೀ ಬಸವೇಶ್ವರ ವೃತ್ತದಲ್ಲಿರುವ ಬಿಕೆಡಿಬಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಸ್ಥಳೀಯ ಬಿಜೆಪಿ ಪಕ್ಷದ ವತಿಯಿಂದ ಆಯೋಜಿಸಿದ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದರು. ಅವರಲ್ಲಿ ಬಂಡೆ ಇದ್ದರೆ ನಮ್ಮಲ್ಲಿ ಹತೋಡಿ ಇದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಕುರಿತು ವ್ಯಂಗ್ಯವಾಡಿದರು. ಬಿಜೆಪಿಗೆ ಹಿಂದಿನಿಂದಲು ಭದ್ರಕೋಟೆಯಂತಿರುವ ಬೀದರ್ ಜಿಲ್ಲೆಯ ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಸೂರ್ಯ-ಚಂದ್ರ ಹುಟ್ಟುವುದು ಎಷ್ಟು ಸತ್ಯವೋ, ನಮ್ಮ ಪಕ್ಷ ಗೆಲ್ಲುವುದು ಕೂಡ ಅಷ್ಟೇ ಸತ್ಯ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಳೆದ ಕೆಲ ದಿನಗಳ ಹಿಂದೆ ಆರ್‌ಆರ್ ನಗರ ಮತ್ತು ಶಿರಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಅಭೂತಪೂರ್ವ ಜಯ ಸಾಧಿಸಿದ್ದಾರೆ. ಇದು ಕಾಂಗ್ರೆಸ್ ಪಕ್ಷದವರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಬಂದರೂ ಸಹ ಅವರ ಯಾವುದೇ ಆಟ ನಡೆಯಲ್ಲ, ಚುನಾವಣೆಯಲ್ಲಿ ನಾನು ಕೂಡಾ 25 ದಿನಗಳ ಕಾಲ ಮನೆ ಮಾಡಿ ಇಲ್ಲೇ ಇರುತ್ತೇನೆ. ಕಾಂಗ್ರೆಸ್‌ನವರು ಯಾವ ಆಟ ಮಾಡ್ತಾರೆ ನೋಡೋಣ ಎಂದು ಸವಾಲು ಎಸೆದರು.
ಟಿಕೆಟ್ ವಿಷಯದಲ್ಲಿ ಆಕಾಂಕ್ಷಿಗಳಿಂದ ಪಕ್ಷದಲ್ಲಿ ಗುಂಪುಗಾರಿಕೆ ಮಾಡುವುದು ಸಹಿಸಲಾಗದು. ಎಲ್ಲರೂ ಸೇರಿಕೊಂಡು ಒಂದೇ ವಾಹನದಲ್ಲಿ ಕ್ಷೇತ್ರದಲ್ಲಿ ಒಂದು ಸುತ್ತು ಪ್ರಚಾರ ಮಾಡುವ ಮೂಲಕ ಟಿಕೆಟ್ ಯಾರಿಗೆ ಸಿಕ್ಕರು ನಾವೆಲ್ಲ ಸೇರಿ ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡಿ ಗೆಲ್ಲಿಸಲು ಪ್ರಯತ್ನಿಸುತ್ತೆವೆ ಎಂದು ಜನರಲ್ಲಿ ಭರವಸೆ ಮೂಡಿಸಬೇಕು ಎಂದು ಸಲಹೆ ನೀಡಿದರು.
ಚಪ್ಪಾಳೆಗೆ ಗರಂ ಆದ ಡಿಸಿಎಂ: