ಬೀದರ್: ವಿಶೇಷ ಚೇತನರ ಕಲ್ಯಾಣಕ್ಕಾಗಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಗೌರವಧನದ ಮೇಲೆ ಕೆಲಸ ಮಾಡುತ್ತಿರುವ ವಿಶೇಷ ಚೇತನರಿಗೆ ಕನಿಷ್ಠ ವೇತನ ನೀಡುವಂತೆ ಆಗ್ರಹಿಸಿ ವಿಶೇಷ ಚೇತನ ನೌಕರರು ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.
ಕನಿಷ್ಠ ವೇತನಕ್ಕಾಗಿ ಆಗ್ರಹಿಸಿ ವಿಶೇಷ ಚೇತನರಿಂದ ಪ್ರತಿಭಟನೆ - Disabled protest in bidar
ಗ್ರಾಮ ಪಂಚಾಯತಿ ಮಟ್ಟದಲ್ಲಿ ಗೌರವಧನದ ಮೇಲೆ ಕೆಲಸ ಮಾಡುತ್ತಿರುವ ವಿಶೇಷ ಚೇತನರಿಗೆ ಕನಿಷ್ಠ ವೇತನ ನೀಡುವಂತೆ ಆಗ್ರಹಿಸಿ ವಿಶೇಷ ಚೇತನ ನೌಕರರು ಪ್ರತಿಭಟನೆ ನಡೆಸಿದ್ದಾರೆ.

ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿಗಳ ವೃತ್ತದವರೆಗೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ವಿಶೇಷ ಚೇತನ ನೌಕರರ ಸಂಘದ ಮುಖಂಡರು, ಸರ್ಕಾರ ನಮ್ಮ ಕುಟುಂಬ ನಿರ್ವಹಣೆಗೆ ಸಾಕಾಗುವಷ್ಟಾದ್ರು ವೇತನ ನೀಡಲಿ. ಇಲ್ಲವಾದ್ರೆ ಒಂದಿಷ್ಟು ವಿಷ ಕೊಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರ್ಕಾರದ ವಿವಿಧ ಯೋಜನೆಗಳಲ್ಲಿ ವಿಶೇಷ ಚೇತನರ ಅಭಿವೃದ್ಧಿಗಾಗಿ ಬರುವ ಅನುದಾನವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ವಿಶೇಷ ಚೇತನ ಸಿಬ್ಬಂದಿಯನ್ನು ನೇಮಕ ಮಾಡಿಕೊಂಡು 11 ವರ್ಷಗಳಾಗಿದ್ದರೂ ಗ್ರಾಮ ಪಂಚಾಯತಿ ಮಟ್ಟದ ನೌಕರರಿಗೆ 3 ಸಾವಿರ ಮಾತ್ರ ನೀಡಲಾಗ್ತಿದೆ. ಇದರಿಂದ ನಮ್ಮ ಕುಟುಂಬ ನಿರ್ವಹಣೆ ಅಸಾಧ್ಯವಾಗಿದೆ. ಹೀಗಾಗಿ ಸರ್ಕಾರ ನಮಗೆ ಕನಿಷ್ಠ ವೇತನ ನೀಡಬೇಕು. ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.