ಬೀದರ್:ಕೊರೊನಾ ನಿಯಂತ್ರಣ ಮಾಡುವ ಹಿನ್ನೆಲೆಯಲ್ಲಿ ಸರ್ಕಾರ ಜಾರಿಗೆ ತಂದಿರುವ ನಿಷೇಧಾಜ್ಞೆ ಯಥಾವತ್ತಾಗಿ ಜಾರಿಯಾಗಲಿ. ಈ ವೇಳೆಯಲ್ಲಿ ಜನರ ಮೇಲೆ ಲಾಠಿ ಬೀಸೋದು ಬೇಡ. ಬೇಕಿದ್ದರೆ ಕೇಸ್ ದಾಖಲಿಸಿ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ಪೊಲೀಸ್ ಅಧಿಕಾರಿಗಳಿಗೆ ಸಲಹೆ ನೀಡಿದರು.
ಜಿಲ್ಲೆಯ ಔರಾದ್, ಭಾಲ್ಕಿ, ಬಸವಕಲ್ಯಾಣ ಹಾಗೂ ಹುಮನಾಬಾದ್ ತಾಲೂಕಿನಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವರು, ತಾಲೂಕು ಮಟ್ಟದ ಅಧಿಕಾರಿಗಳ ಪ್ರತ್ಯೇಕ ತಂಡಗಳ ರಚನೆ ಮಾಡುವಂತೆ ಆಯಾ ತಹಶೀಲ್ದಾರ್‌ಗೆ ಸೂಚನೆ ನೀಡಿದರು.