ಕರ್ನಾಟಕ

karnataka

ETV Bharat / state

ಬಸವಕಲ್ಯಾಣ ಅಭಿವೃದ್ಧಿ ಪ್ರಾಧಿಕಾರಕ್ಕೆ ಡಾ. ಹೆಚ್.ಆರ್ ಮಹದೇವ್ ಸಾರಥ್ಯ - ಬಸವಕಲ್ಯಾಣ ಅಭಿವೃದ್ಧಿ ಪ್ರಾಧಿಕಾರ ಸುದ್ದಿ

ಬಸವಕಲ್ಯಾಣ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಅಧಿಕಾರಿಯಾಗಿ ಡಾ. ಹೆಚ್.ಆರ್. ಮಹದೇವ್ ಅವರನ್ನು ವರ್ಗಾವಣೆ ಮಾಡಲಾಗಿದೆ.

mahadev
ಹೆಚ್.ಆರ್ ಮಹದೇವ್

By

Published : Oct 6, 2020, 3:06 AM IST

ಬೀದರ್ :ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ಡಾ. ಹೆಚ್.ಆರ್. ಮಹದೇವ್ ಅವರನ್ನು ಬಸವಕಲ್ಯಾಣ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಅಧಿಕಾರಿಯಾಗಿ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಆದೇಶ ಪ್ರತಿ

ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕನ್ ಅವರು ಸುತ್ತೋಲೆ ಹೊರಡಿಸಿದ್ದು, ಸದ್ಯ ಬೀದರ್ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರ ಹೆಚ್ಚುವರಿ ಜವಾಬ್ದಾರಿಯಲ್ಲಿರುವ ಬಸವಕಲ್ಯಾಣ ಅಭಿವೃದ್ಧಿ ಪ್ರಾಧಿಕಾರಕ್ಕೆ ಡಾ. ಹೆಚ್.ಆರ್ ಮಹದೇವ್ ಅವರನ್ನು ನಿಯೋಜನೆಗೊಳಿಸಲಾಗಿದೆ.

ಸರ್ಕಾರದ ಈ ಆದೇಶದಿಂದ ಈ ಹಿಂದೆ ಸುದೀರ್ಘಕಾಲ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಡಾ. ಮಹದೇವ್ ಅವರ ಸೇವಾವಧಿಯನ್ನು ಅನುಭವಿಸಿರುವ ಜಿಲ್ಲೆಯ ಜನರಲ್ಲಿ ಹರ್ಷ ವ್ಯಕ್ತವಾಗಿದೆ. ಬಸವಕಲ್ಯಾಣ ಅಭಿವೃದ್ಧಿಗೆ ಹೊಸ ಪರ್ವ ಆರಂಭವಾಗಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿದೆ.

ABOUT THE AUTHOR

...view details