ಕರ್ನಾಟಕ

karnataka

ETV Bharat / state

ಕುಡಿವ ನೀರಿನ ಸಮಸ್ಯೆ ಬಗೆಹರಿಸಲಾಗುವುದು: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ - KPCC president Ishwar Khandre latest news

ಕುಡಿಯುವ ನೀರಿನ ಸಮಸ್ಯೆ ಸಮರ್ಥವಾಗಿ ನಿಭಾಯಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಭಾಲ್ಕಿ ಜನರಿಗೆ ಭರವಸೆ ನೀಡಿದ್ದಾರೆ.

KPCC president Ishwar Khandre
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ

By

Published : Mar 28, 2020, 11:45 PM IST

ಬೀದರ್: ಕೊರೊನಾ ವೈರಸ್ ಹರಡುವ ಭೀತಿ ನಡುವೆ ಬೇಸಿಗೆಯಲ್ಲಿ ಉಲ್ಬಣಗೊಂಡ ಕುಡಿಯುವ ನೀರಿನ ಸಮಸ್ಯೆ ಸಮರ್ಥವಾಗಿ ನಿಭಾಯಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಭರವಸೆ ನೀಡಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ


ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಭಾಲ್ಕಿ ವಿಧಾನಸಭೆ ಜನರು ಕೊರೊನಾ ನಿಯಂತ್ರಿಸಲು ಸಹಕರಿಸಬೇಕಿದೆ. ಈ ನಿಟ್ಟಿನಲ್ಲಿ ಯಾರೊಬ್ಬರೂ ಮನೆಯಿಂದ ಹೊರ ಬಾರದೆ ಸರ್ಕಾರದ ನಿಯಮಗಳನ್ನು ಪಾಲಿಸಿ ಎಂದು ಮನವಿ ಮಾಡಿದ್ದಾರೆ. ಅಲ್ಲದೆ, ಬೇಸಿಗೆ ಆರಂಭದ ದಿನಗಳಿಂದ ಭಾಲ್ಕಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಹೀಗಾಗಿ ತಾಲೂಕು ಆಡಳಿತ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಮುಂದಾಗಿದೆ. ಈ ವೇಳೆಯಲ್ಲಿ ಕೊರೊನಾ ವೈರಸ್ ಸೊಂಕು ಹರಡದಂತೆ ಸಾಮಾಜಿಕ ಅಂತರ ಕಾಪಾಡಬೇಕಾಗಿದೆ. ಟ್ಯಾಂಕರ್ ಮನೆ ಮುಂದೆ ಬಂದಾಗ ಎಲ್ಲರೂ ನೀರಿಗಾಗಿ ಒಮ್ಮಲೆ ಮುಗಿ ಬೀಳುವುದರಿಂದ ಸೋಂಕು ಹರಡುವ ಸಾಧ್ಯತೆ ಇದೆ. ಹೀಗಾಗಿ ಜಾಗರೂಕತೆಯಿಂದ ವರ್ತಿಸಿ ಎಂದು ಮನವಿ ಮಾಡಿದ್ದಾರೆ.

ABOUT THE AUTHOR

...view details