ಬೀದರ್ :ರಾಜ್ಯದಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, ಇದರ ಸೋಲಿನ ಭೀತಿಯಿಂದ ಬಿಜೆಪಿ ನಾಯಕರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಕುಟುಂಬದ ಮೇಲೆ ಸಿಬಿಐ ದಾಳಿ ಮಾಡಿಸಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆರೋಪಿಸಿದ್ದಾರೆ.
ಉಪ ಚುನಾವಣೆ ಸೋಲಿನ ಭೀತಿಯಿಂದ ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ; ಈಶ್ವರ ಖಂಡ್ರೆ - DK Shivakumar news
ಸುಗ್ರೀವಾಜ್ಞೆ ಮೂಲಕ ಎಪಿಎಂಸಿ ತಿದ್ದುಪಡಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ ಸೇರಿ ಹಲವು ಕರಾಳ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ಸರ್ಕಾರಗಳು ಜನರ ಆಕ್ರೋಶಕ್ಕೆ ಕಾರಣವಾಗಿದೆ..
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವಕ್ಕೆ ಮಾರಕವಾದ ಈ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದಿದ್ದಾರೆ. ದೇಶದಲ್ಲಿ ಬಿಜೆಪಿ ಸರ್ಕಾರದ ದುರಾಡಳಿತ ಮಿತಿಮೀರಿದೆ.
ಸುಗ್ರೀವಾಜ್ಞೆ ಮೂಲಕ ಎಪಿಎಂಸಿ ತಿದ್ದುಪಡಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ ಸೇರಿ ಹಲವು ಕರಾಳ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ಜನರ ಆಕ್ರೋಶಕ್ಕೆ ಕಾರಣವಾಗಿದ್ದಾರೆ. ಇದರ ನಡುವೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಸಂಸದ ಡಿ ಕೆ ಸುರೇಶ್ ಅವರ ನಿವಾಸದ ಮೇಲೆ ಸಾಮೂಹಿಕ ದಾಳಿ ಮಾಡಿರುವುದು ತೀವ್ರ ಖಂಡನೀಯ ಎಂದರು.
Last Updated : Oct 5, 2020, 8:08 PM IST