ಬಸವಕಲ್ಯಾಣ:ಮಕ್ಕಳಲ್ಲಿ ಕಂಡುಬರುತ್ತಿರುವ ಅಪೌಷ್ಟಿಕ ಸಮಸ್ಯೆ ಹೋಗಲಾಡಿಸುವ ಉದ್ದೇಶದಿಂದ ಸರ್ಕಾರದಿಂದ ವಿವಿಧ ಪೌಷ್ಟಿಕಾಂಶಗಳುಳ್ಳ ಆಹಾರ ನೀಡಲಾಗುತ್ತಿದ್ದು, ಪ್ರತಿ ಮಗುವಿಗೆ ಕಡ್ಡಾಯವಾಗಿ ಆಹಾರ ವಿತರಿಸುವ ಮೂಲಕ ಸಮಸ್ಯೆ ನಿವಾರಣೆಗೆ ಕಾಳಜಿ ವಹಿಸಬೇಕೆಂದು ತಾ.ಪಂ ಅಧ್ಯಕ್ಷೆ ಯಶೋಧಾ ನೀಲಕಂಠ ರಾಠೋಡ್ ಸಲಹೆ ನೀಡಿದರು.
ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪೋಷಣ್ ಮಾಸಾಚರಣೆ ನಿಮಿತ್ತ ಶಿಶು ಅಭಿವೃದ್ಧಿ ಯೋಜನೆಯಡಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಹಿಳೆಯರು ಮತ್ತು ಮಕ್ಕಳ ಸಮಸ್ಯೆ ನಿವಾರಣೆಗಾಗಿ ಎಲ್ಲರು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಎಂದು ತಿಳಿಸಿದರು.