ಬಸವಕಲ್ಯಾಣ:ಸಾಲಬಾಧೆಯಿಂದ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಚಂಡಕಾಪೂರ ಗ್ರಾಮದಲ್ಲಿ ನಡೆದಿದೆ.
ಸಾಲಬಾಧೆ ತಡೆಯಲಾಗದೇ ಬಸವಕಲ್ಯಾಣದಲ್ಲಿ ರೈತ ಆತ್ಮಹತ್ಯೆ - farmer suicide news
ಸಾಲ ತೀರಿಸಲಾಗದೇ ಬಸವಕಲ್ಯಾಣ ತಾಲೂಕಿನ ಚಂಡಕಾಪೂರ ಗ್ರಾಮದ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರೈತ ಆತ್ಮಹತ್ಯೆ
ಮಹಾದೇವ ಭಗವಂತ (55) ಆತ್ಮಹತ್ಯೆ ಮಾಡಿಕೊಂಡ ರೈತ. ಮೃತ ರೈತನಿಗೆ 8 ಎಕರೆ ಜಮೀನಿದ್ದು, ಸಿಂಡಿಕೇಟ್ ಬ್ಯಾಂಕ್‌ನಲ್ಲಿ 5 ಲಕ್ಷ ಹಾಗೂ 50 ಸಾವಿರ ರೂ. ಖಾಸಗಿ ಸಾಲವಿತ್ತು. ಸಾಲ ತೀರಿಸಲಾಗದೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಪಿಎಸ್‌ಐ ವಸಿಮ್ ಪಟೇಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.