ಕರ್ನಾಟಕ

karnataka

ETV Bharat / state

ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ - Bidar news

ಸಾಲದ ಶೂಲಕ್ಕೆ ಸಿಲುಕಿ ಬೇಸತ್ತ ರೈತನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಬೀದರ್​ ಜಿಲ್ಲೆಯ ಹುಲಸೂರಿನಲ್ಲಿ ನಡೆದಿದೆ.

Farmer commits suicide
ನೇಣಿಗೆ ಶರಣಾದ ರೈತ

By

Published : Jun 22, 2020, 8:55 PM IST

ಬಸವಕಲ್ಯಾಣ(ಬೀದರ್​):ಸಾಲಬಾಧೆಯಿಂದ ಬೇಸತ್ತ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಲಸೂರ ತಾಲೂಕಿನ ಗಡಿಗೌಂಡಗಾಂವ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಉಮೇಶ ಬಸಪ್ಪ ತಾಂಬೋಳೆ(35) ಆತ್ಮಹತ್ಯೆ ಮಾಡಿಕೊಂಡ ರೈತ. ಮೃತ ರೈತನಿಗೆ 3 ಎಕರೆ ಜಮೀನು ಇದ್ದು, ಗ್ರಾಮದ ಪಿಕೆಪಿಎಸ್‌ನಲ್ಲಿ 80 ಸಾವಿರ ರೂ. ಸಾಲವಿದೆಯಂತೆ. ಕಳೆದ ವರ್ಷ ಸರಿಯಾಗಿ ಮಳೆ ಬಾರದ ಕಾರಣ ಬೆಳೆ ಕೈಕೊಟ್ಟಿದ್ದು, ಸಾಲ ತೀರಿಸಲಾಗದೆ ಮನನೊಂದು ತನ್ನ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಈ ಕುರಿತು ಹುಲಸೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್‌ಐ ಗೌತಮ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ABOUT THE AUTHOR

...view details