ಬೀದರ್: ವಿವಿಧ ಪ್ರಕರಣಗಳಲ್ಲಿ ಪೊಲೀಸ್ ಠಾಣೆಯ ವಶದಲ್ಲಿರುವ ಕಾರು, ಬೈಕ್ಗಳಿಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಜಿಲ್ಲೆಯ ಹುಮನಾಬಾದ್ ಪಟ್ಟಣದ ಬಸ್ ನಿಲ್ದಾಣ ಪಕ್ಕದಲ್ಲಿರುವ ಪೊಲೀಸ್ ಠಾಣೆ ಆವರಣದಲ್ಲಿ ನಡೆದಿದೆ.
ಬಿಸಿಲ ಆರ್ಭಟದಿಂದ ಪೊಲೀಸರ ವಶದಲ್ಲಿದ್ದ ವಾಹನಗಳಿಗೆ ದಿಢೀರ್ ಬೆಂಕಿ?! - undefined
ವಿವಿಧ ಪ್ರಕರಣಗಳಲ್ಲಿ ಪೊಲೀಸ್ ಠಾಣೆಯ ವಶದಲ್ಲಿರುವ ಕಾರು, ಬೈಕ್ಗಳಿಗೆ ಆಕಸ್ಮಿಕವಾಗಿ ಬೆಂಕಿ. ಬೀದರ್ ಜಿಲ್ಲೆಯ ಹುಮನಾಬಾದ್ ಪಟ್ಟಣದ ಬಸ್ ನಿಲ್ದಾಣ ಪಕ್ಕದಲ್ಲಿರುವ ಪೊಲೀಸ್ ಠಾಣೆ ಆವರಣ. ಬೆಂಕಿ ನಂದಿಸುವಲ್ಲಿ ಅಗ್ನಿ ಶಾಮಕ ದಳದ ಸಿಬ್ಬಂದಿ ಯಶಸ್ವಿ.
ಬೆಂಕಿ
ಬೈಕ್, ಕಾರ್ಗಳಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಪಕ್ಕದಲ್ಲೇ ಬಸ್ ನಿಲ್ದಾಣ ಇರೋದರಿಂದ ಸಂಭವಿಸಬಹುದಾಗಿದ್ದ ಭಾರಿ ದುರಂತವೊಂದು ತಪ್ಪಿದೆ.
ವಾಹನದಲ್ಲಿದ್ದ ಪೆಟ್ರೋಲ್ನಿಂದಾಗಿ ಬಿಸಿಲಿನ ತಾಪದಿಂದ ಈ ಅವಘಡ ಸಂಭವಿಸಿದೆ ಎಂಬ ಶಂಕೆ ವ್ಯಕ್ತವಾಗಿದೆ.