ಬೀದರ್:ನಗರದ ಚಿಕ್ಕಪೇಟ್ ಗ್ರಾಮದ ರಿಂಗ್ ರಸ್ತೆಯ ಬಳಿ ವಿದ್ಯುತ್ ಕಂಬಕ್ಕೆ ತಲೆ ಜಜ್ಜಿ ಭೀಕರವಾಗಿ ಕೊಲೆಯಾದ ಸ್ಥಿತಿಯಲ್ಲಿ ಯುವಕನೊಬ್ಬನ ಶವ ಪತ್ತೆಯಾಗಿದ್ದು, ಮೃತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಕಲ್ಲಪ್ಪ(28) ಮೃತ ಪಟ್ಟ ವ್ಯಕ್ತಿ.

ಈತ ಮೂಲತಃ ಔರಾದ್ ತಾಲೂಕಿನ ವಡಗಾಂವ್ ಗ್ರಾಮದ ನಿವಾಸಿಯಾಗಿದ್ದಾನೆ. ಈತನನ್ನು ದುಷ್ಕರ್ಮಿಗಳು ಹಿಡಿದು ವಿದ್ಯುತ್ ಕಂಬಕ್ಕೆ ತಲೆಯನ್ನು ಜಜ್ಜಿ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ.
ಮೃತ ಕಲ್ಲಪ್ಪ ನಗರದ ಗಾಂಧಿಗಂಜನ ತಿರುಮಲ ಹೋಟೆಲ್ನಲ್ಲಿ ಕೆಲಸ ಮಾಡಿಕೊಂಡಿದ್ದು, ಚಿಕ್ಕಪೇಟ್ ಗ್ರಾಮದ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದ ಎನ್ನಲಾಗಿದೆ. ಆದ್ರೆ ಕಲ್ಲಪ್ಪ ಇಂದು ಬೆಳಿಗ್ಗೆ ಶವವಾಗಿ ಪತ್ತೆಯಾಗಿದ್ದಾನೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ. ಶ್ರೀಧರ ಅವರು ಸ್ಥಳ ಪರಿಶಿಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.
TAGGED:
MURDER IN BIDAR