ಬಸವಕಲ್ಯಾಣ (ಬೀದರ್): ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಟಿಕೆಟ್ ಪ್ರಮುಖ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಬಿಜೆಪಿಗೆ ಸೆಡ್ಡು ಹೊಡೆದು ಪಕ್ಷೇತರ ಅಭ್ಯರ್ಥಿಯಾಗಿ ಕಣ್ಣಕ್ಕೆ ಇಳಿಯುವ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.
ಕಳೆದ ವಿಧಾನ ಸಭೆ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ತೊರೆದು ಬಿಜೆಪಿಗೆ ಬಂದು ಬಿಜೆಪಿ ಟಿಕೆಟ್ ಪ್ರಮುಖ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ, ಸ್ವಾಭಿಮಾನಿ ಬಳಗದ ಅಪಾರ ಬೆಂಬಲಿಗರೊಂದಿಗೆ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಟಕೆಟ್‌ಗಾಗಿ ಕಡೇ ಕ್ಷಣದವರೆಗೆ ಲಾಬಿ ನಡೆಸಿದ ಖೂಬಾಗೆ ಬದಲು ಕಲಬುರಗಿಯ ಶರಣು ಸಲಗರ್‌ಗೆ ನೀಡಲಾಗಿತ್ತು. ಇದರಿಂದ ಸಿಡಿದೆದ್ದ ಮಾಜಿ ಶಾಸಕ ಖೂಬಾ, ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಚರ್ಚೆಗಳು ನಡೆದಿದ್ದವು. ನಗರದ ಅಕ್ಕ ಮಹಾದೇವಿ ಕಾಲೇಜು ಮೈದಾನದಲ್ಲಿ ಸ್ವಾಭಿಮಾನಿ ಬಸವಕಲ್ಯಾಣ ಬಳಗ ಹಾಗೂ ತಮ್ಮ ಅಭಿಮಾನಿಗಳ ಸಭೆ ನಡೆಸಿದ ನಂತರ ಬೆಂಬಲಿಗರ ಒತ್ತಾಯದ ಮೇರೆಗೆ ಕಣಕ್ಕಿಳಿಯುತ್ತಿರುವುದಾಗಿ ಘೋಷಿಸಿ, ವೇದಿಕೆಯಿಂದ ನೇರವಾಗಿ ಅಂಬೇಡ್ಕರ್ ವೃತ್ತಕ್ಕೆ ಪಾದಯಾತ್ರೆಯೊಂದಿಗೆ ಆಗಮಿಸಿ, ಅಲ್ಲಿಂದ ವಾಹನದ ಮೂಲಕ ಮಿನಿ ವಿಧಾನ ಸೌಧಕ್ಕೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.