ಬೀದರ್: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ನಮ್ಮನ್ನೆಲ್ಲಾ ಅಗಲಿದ್ದು ದೇಶಕ್ಕೆ ತುಂಬಲಾಗದ ನಷ್ಟವಾಗಿದೆ. ಒಬ್ಬ ಧೀಮಂತ ನಾಯಕನನ್ನು ಕಳೆದುಕೊಂಡಿದ್ದೇವೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಸಂತಾಪ ವ್ಯಕ್ತಪಡಿಸಿದ್ದಾರೆ.
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ಶೆಟ್ಟರ್, ಚೌವ್ಹಾಣ್ ಸಂತಾಪ - ಜಗದೀಶ್ ಶೆಟ್ಟರ್
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹಾಗೂ ಸಚಿವ ಪ್ರಭು ಚೌವ್ಹಾಣ್ ಸಂತಾಪ ಸೂಚಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಪ್ರಣಬ್ ಮುಖರ್ಜಿ ಅವರು ರಾಷ್ಟ್ರಪತಿ ಆಗುವ ಮೂಲಕ ಆ ಹುದ್ದೆಯ ಗೌರವ ಹೆಚ್ಚಿಸಿದ್ದಾರೆ. ಪಕ್ಷಾತೀತವಾಗಿ ನಡೆದುಕೊಳ್ಳುವ ಅವರ ನಡೆಯಿಂದಾಗಿಯೇ ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ. ಅವರ ಅಗಲಿಕೆ ದುಃಖ ತಡೆಯುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ ಎಂದು ಶೆಟ್ಟರ್ ಕಂಬನಿ ಮಿಡಿದಿದ್ದಾರೆ.
ಸಚಿವ ಪ್ರಭು ಚೌವ್ಹಾಣ್ ಸಂತಾಪ: ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಪಶು ಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ಸಂತಾಪ ವ್ಯಕ್ತಪಡಿಸಿದ್ದು, ಪ್ರಬಲ ಹಾಗೂ ಶಸಕ್ತ ರಾಜಕಾರಣಿಯೊಬ್ಬರನ್ನು ಕಳೆದುಕೊಂಡಿದ್ದೇವೆ. ಅವರ ಅಗಲಿಕೆ ನಮ್ಮೆಲ್ಲರಿಗೆ ನೋವು ತಂದಿದ್ದು, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದರು.