ಬೀದರ್:ಕಲುಷಿತ ನೀರು ಸೇವನೆ ಮಾಡಿ ನಾಲ್ಕು ಜನರು ವಾಂತಿ ಭೇದಿಯಿಂದ ನರಳಿ ಗಂಭೀರವಾಗಿ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ನಡೆದಿದೆ.
ಬೀದರ್ನಲ್ಲಿ ಕಲುಷಿತ ನೀರು ಸೇವಿಸಿ ನಾಲ್ವರು ಅಸ್ವಸ್ಥ - Bidar
ಭಾಲ್ಕಿ ತಾಲೂಕಿನ ಚಳಕಾಪೂರ್ ಗ್ರಾಮದಲ್ಲಿ ಕಲುಷಿತ ನೀರು ಸೇವನೆ ಮಾಡಿ ನಾಲ್ಕು ಜನರು ವಾಂತಿ ಭೇದಿಯಿಂದ ಬಳಲುತ್ತಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಲುಷಿತ ನೀರು
ಜಿಲ್ಲೆಯ ಭಾಲ್ಕಿ ತಾಲೂಕಿನ ಚಳಕಾಪೂರ್ ಗ್ರಾಮದಲ್ಲಿ ಈ ಅವಘಡ ನಡೆದಿದೆ. ಭಯಂಕರ ಬರಗಾಲ ಹಿನ್ನೆಲೆಯಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗ್ತಿದ್ದು, ಟ್ಯಾಂಕರ್ ನಿಂದ ಬಂದ್ ನೀರು ಕುಡಿದ ನಾಲ್ಕು ಜನರು ಅಸ್ವಸ್ಥಗೊಂಡಿದ್ದಾರೆ.
ಶಿವಕಾಂತ(45), ನಂದಿನಿ(11), ಭವಾನಿ(14) ಹಾಗೀ ಸವಿತಾ (17) ಎಂಬುವರು ವಾಂತಿ ಭೇದಿಯಿಂದ ಬಳಲುತ್ತಿದ್ದು, ಅವರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.