ಬೀದರ್:ದೇಶದೆಲ್ಲೆಡೆ ವಿಶ್ವ ಯೋಗ ದಿನದ ಸಂಭ್ರಮದಲ್ಲಿರುವಾಗ ನಗರದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಯೊಂದು ಪುಕ್ಕಟೆ ಪ್ರಚಾರ ಗಿಟ್ಟಿಸಿಕೊಂಡಿದೆ.
ಯೋಗ ದಿನದ ಸಂಭ್ರಮದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿಕೊಂಡ ಶಿಕ್ಷಣ ಸಂಸ್ಥೆ! - undefined
ಬೀದರ್ನಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಯೊಂದು ತಮ್ಮ ಸಂಸ್ಥೆಯ ಹೆಸರು ಇರುವ ಟೀ ಶರ್ಟ್ಗಳನ್ನು ಹಂಚಿ ಪುಕ್ಕಟೆ ಪ್ರಚಾರ ಗಿಟ್ಟಿಸಿಕೊಂಡಿದೆ.
ನಗರದ ಫಾರ್ಮಸಿ ಕಾಲೇಜು ಅಂಗಳದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ 5 ನೇ ವಿಶ್ವ ಯೋಗ ದಿನದ ಕಾರ್ಯಕ್ರಮದಲ್ಲಿ ನಗರದ ಶಾಹೀನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ಖದೀರ್ ಹಾಗೂ ಸಿಬ್ಬಂದಿ ತಮ್ಮ ಸಂಸ್ಥೆಯ ಹೆಸರು ಇರುವ ಟೀ ಶರ್ಟ್ಗಳನ್ನು ಹಂಚಿದ್ದಾರೆ. ಯೋಗದ ಬಗ್ಗೆ ಮಾತನಾಡಲು ಬಂದವರೆಲ್ಲಾ ಇದೇನು ಖಾಸಗಿ ಶಾಲೆ ಕಾರ್ಯಕ್ರಮದ ಹಾಗೆ ಕಾಣುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಯೋಗ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ.ಹೆಚ್.ಆರ್. ಮಹದೇವ್ ಚಾಲನೆ ನೀಡಿದರು. ಜಿ.ಪಂ ಅಧ್ಯಕ್ಷೆ ಗೀತಾ ಚಿದ್ರಿ ಮಾತ್ರ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಭಾರಿ ಮಟ್ಟದಲ್ಲಿ ಅಧಿಕಾರಿಗಳು ಜನಪ್ರತಿನಿಧಿಗಳ ಅನುಪಸ್ಥಿತಿ ಎದ್ದು ಕಾಣುತ್ತಿತ್ತು.