ಕರ್ನಾಟಕ

karnataka

ETV Bharat / state

ರಸ್ತೆ ದಾಟುತ್ತಿದ್ದ ವೇಳೆ ಗೂಡ್ಸ್ ವಾಹನ ಡಿಕ್ಕಿ: ಆಸ್ಪತ್ರೆಯಲ್ಲಿ ವಿದ್ಯಾರ್ಥಿ ಸಾವು

ರಸ್ತೆ ದಾಟುತ್ತಿದ್ದ ವೇಳೆ ಗೂಡ್ಸ್ ವಾಹನ ಡಿಕ್ಕಿಯಾಗಿ ವಿದ್ಯಾರ್ಥಿ ಮೃತಪಟ್ಟ ಘಟನೆ ತಾಲ್ಲೂಕಿನ ಘೋಟಾಳ ಗ್ರಾಮದ ಸಮೀಪ ನಡೆದಿದೆ.

Goods vehicle Accident: student death
ಗೂಡ್ಸ್ ವಾಹನ ಡಿಕ್ಕಿ: ವಿದ್ಯಾರ್ಥಿ ಸಾವು

By

Published : Dec 28, 2019, 3:07 PM IST

ಬಸವಕಲ್ಯಾಣ : ರಸ್ತೆ ದಾಟುತ್ತಿದ್ದ ಗೂಡ್ಸ್ ವಾಹನ ಡಿಕ್ಕಿಯಾಗಿ ವಿದ್ಯಾರ್ಥಿ ಮೃತಪಟ್ಟ ಘಟನೆ ತಾಲ್ಲೂಕಿನ ಘೋಟಾಳ ಗ್ರಾಮದ ಸಮೀಪ ನಡೆದಿದೆ.

ಘೋಟಾಳ ಗ್ರಾಮದ ಜ್ಞಾನೇಶ್ವರ ಅಶೋಕ ಗೌಳಿ(17) ಮೃತ ವಿದ್ಯಾರ್ಥಿ.

ಬಸವಕಲ್ಯಾಣ ನಗರದ ಖಾಸಗಿ ಕಾಲೇಜಿನಲ್ಲಿ ಪಿಯು ವಿದ್ಯಾರ್ಥಿಯಾಗಿದ್ದ ಈತ ಕಾಲೇಜು ಮುಗಿಸಿಕೊಂಡು ಸಂಜೆ ಬೈಕ್ ಮೂಲಕ ಗ್ರಾಮಕ್ಕೆ ಮರಳುತ್ತಿದ್ದ. ಈ ವೇಳೆ ಮಾರ್ಗ ಮಧ್ಯೆ ಬೈಕ್ ನಿಲ್ಲಿಸಿ ರಸ್ತೆ ಬದಿ ಮೂತ್ರ ವಿಸರ್ಜನೆ ಮಾಡಿ ಹಿಂತಿರುಗುತ್ತಿದ್ದಾಗ ವಾಹನ ಡಿಕ್ಕಿ ಹೊಡೆದಿದೆ ಎಂಬ ಮಾಹಿತಿ ಇದೆ.

ಗೂಡ್ಸ್ ವಾಹನ ಡಿಕ್ಕಿ: ವಿದ್ಯಾರ್ಥಿ ಸಾವು

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಈತನನ್ನು ಚಿಕಿತ್ಸೆಗಾಗಿ ಮಹಾರಾಷ್ಟ್ರದ ಉಮರ್ಗಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿ ಮೃತಪಟ್ಟಿದ್ದಾನೆ.

ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details