ಬೀದರ್:ಶಿಕ್ಷಕರು ಪ್ರತಿಭಟನೆ ಹೆಸರಿನಲ್ಲಿ ಮಂಗಳವಾರ ಶಾಲೆಗೆದಿಢೀರ್ ಬೀಗ ಹಾಕಿರುವ ಹಿನ್ನೆಲೆ ಶಾಲೆಗೆ ಬಂದ ವಿದ್ಯಾರ್ಥಿಗಳು ದಿಕ್ಕು ಕಾಣದೆ ಪರದಾಡಿದ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.
ಸರ್ಕಾರಿ ಶಾಲೆಗಳಿಗೆ ಬೀಗ ಹಾಕಿ ಶಿಕ್ಷಕರಿಂದ ಪ್ರತಿಭಟನೆ: ವಿದ್ಯಾರ್ಥಿಗಳ ಪರದಾಟ...! - undefined
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸರ್ಕಾರಿ ಶಾಲೆಯ ಶಿಕ್ಷಕರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಪರಿಣಾಮ ಶಾಲೆಗೆ ಬಂದ ವಿದ್ಯಾರ್ಥಿಗಳು ದಿಕ್ಕು ತೋಚದೆ ಪರದಾಡಿದರು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ಶಾಲೆ ಶಿಕ್ಷಕರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಜಿಲ್ಲೆಯ ಕೆಲವೊಂದು ಭಾಗದಲ್ಲಿ ಶಿಕ್ಷಕರು ಶಾಲೆಗೆ ಬೀಗ ಹಾಕಿದ್ರೆ ಕೆಲವೆಡೆ ಎಂದಿನಂತೆ ಶಾಲಾ ತರಗತಿಗಳು ನಡೆದಿದೆ.ಔರಾದ್, ಕಮಲನಗರ ಹಾಗೂ ಭಾಲ್ಕಿ ತಾಲೂಕಿನ ಕೆಲವೊಂದು ಸರ್ಕಾರಿ ಶಾಲೆಗಳಿಗೆ ಬೀಗ ಜಡಿಯಲಾಗಿತ್ತು. ಒಬ್ಬರೇ ಒಬ್ಬ ಶಿಕ್ಷಕರೂ ಶಾಲೆಗೆ ಹಾಜರಾಗದ ಕಾರಣ ಶಾಲೆಗೆ ಬಂದ ಮಕ್ಕಳು ದಿಕ್ಕು ಕಾಣದೆ ಪರದಾಡಿದ ಸ್ಥಿತಿ ನಿರ್ಮಾಣವಾಗಿತ್ತು.
ರಾಜ್ಯಾದ್ಯಂತ ಪ್ರತಿಭಟನೆ ಇರುವುದರಿಂದ ಶಾಲಾ ವಾತಾವರಣಕ್ಕೆ ಯಾವುದೇ ತೊಂದರೆಯಾಗದಂತೆ ಮಂಗಳವಾರ ಬಂದ್ ಮಾಡಿರುವ ಶಾಲೆಗಳಲ್ಲಿ ಭಾನುವಾರ ತರಗತಿ ನಡೆಸಿ ಇಂದಿನ ರಜೆ ಸರಿಪಡಿಸಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಚಂದ್ರಶೇಖರ್ ಸೂಚಿಸಿದ್ದಾರೆ.