ಬಸವಕಲ್ಯಾಣ (ಬೀದರ್) : ನಗರ ಸೇರಿದಂತೆ ತಾಲೂಕಿನ ಗ್ರಾಮೀಣ ಭಾಗದಲ್ಲಿ ಅಟ್ಟಹಾಸ ಮೆರೆಯುತ್ತಿರುವ ಮಹಾಮಾರಿ ಕೊರೊನಾ ಸೋಂಕು ತಾಲೂಕಿನ ಮಂಠಾಳ ಗ್ರಾಮ ಪಂಚಾಯತ್ ಅಧ್ಯಕ್ಷರನ್ನು ಬಲಿ ಪಡೆದಿದೆ.
ಮಂಠಾಳ ಗ್ರಾ.ಪಂ ಅಧ್ಯಕ್ಷ ಹಣಮಂತ ದತ್ತು ಪದ್ಮೆ(31) ಕೊರೊನಾಗೆ ಬಲಿಯಾದ ಯುವ ಅಧ್ಯಕ್ಷರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೊನಾ ಸೋಂಕು ದೃಢವಾಗಿದ್ದ ಹಿನ್ನೆಲೆ ಕಲಬುರಗಿಯ ಬಸವೇಶ್ವರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಸಂಜೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಕರ್ನಾಟಕ ಗೃಹ ನಿರ್ಮಾಣ ಮಹಾಮಂಡಳಿಯ ನಿವೃತ್ತ ಅಧಿಕಾರಿ ದತ್ತು ಪದ್ಮೆ ಅವರ ಪುತ್ರರಾಗಿದ್ದ ಹಣಮಂತ ಪದ್ಮೆ ಅವರು, ಇತ್ತೀಚಿಗೆ ನಡೆದ ಗ್ರಾ.ಪಂ ಚುನಾವಣೆಯಲ್ಲಿ ಮಂಠಾಳ ಗ್ರಾಮದ ವಾರ್ಡ್ ಸಂಖ್ಯೆ-8ರಿಂದ ಅವಿರೋಧವಾಗಿ ಆಯ್ಕೆಯಾಗಿ, ನೂತನ ಅಧ್ಯಕ್ಷರಾಗಿ ನೇಮಕವಾಗಿದ್ದರು.