ಬೀದರ್:ಕಳೆದ ಒಂದು ವಾರದಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತವಾಗಿದೆ.
ಬೀದರ್ನಲ್ಲಿ ಸತತ ಮಳೆ: ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿದ ನೀರು, ಜನಜೀವನ ಅಸ್ತವ್ಯಸ್ತ - Bidar rain news
ಕಳೆದ ಕೆಲ ದಿನಗಳಿಂದ ಬಿಡುವಿ ನೀಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬೀದರ್ನಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಸ್ಥಳಿಯ ನಿವಾಸಿಗರು ಬದುಕು ಬೀದಿಗೆ ಬಂದಿದೆ.
ಜಿಲ್ಲೆಯ ಔರಾದ್ ಪಟ್ಟಣದ ವಾರ್ಡ್ ನಂಬರ್ 8ರಲ್ಲಿ ಮಳೆ ನೀರು ಸೇರಿದಂತೆ ಚರಂಡಿ ನೀರು ಕೂಡ ನಿವಾಸಿಗರ ಮನೆಗಳಿಗೆ ನುಗ್ಗಿ ಅಪಾರ ಪ್ರಮಾಣದ ಹಾನಿ ಮಾಡಿದೆ. ದಿನ ಬಳಕೆ ವಸ್ತುಗಳು ನೀರು ಪಾಲಾಗಿದ್ದು, ಕಳೆದ ಎರಡು ದಿನಗಳಿಂದ ಮನೆಯನ್ನು ಬಿಟ್ಟು ನಿವಾಸಿಗರು ಬೀದಿಗೆ ಬಂದಿದ್ದಾರೆ.
ಗಬ್ಬು ನಾರುವ ವಾಸನೆಯಿಂದ ಕಂಗೆಟ್ಟು ಹೋಗಿರುವ ಸ್ಥಳೀಯರು ತಕ್ಷಣ ಸ್ವಚ್ಛತೆ ಕಾರ್ಯ ಮಾಡುವಂತೆ ಪಟ್ಟಣ ಪಂಚಾಯತ್ ಅಧಿಕಾರಿಗಳಿಗ ಮನವಿ ಮಾಡಿದ್ದಾರೆ. ಸದ್ಯಕ್ಕೆ ಮನೆಗಳಲ್ಲಿ ತುಂಬಿರುವ ನೀರನ್ನು ಮೊಟಾರ್ಗಳ ಮೂಲಕ ಹೊರತೆಗೆಯುವ ಕೆಲಸ ನಡೆಯುತ್ತಿದೆ. ಮಳೆ ಅವಾಂತರದಿಂದ ಹಾನಿಯಾಗಿರುವುದಕ್ಕೆ ಪರಿಹಾರ ನೀಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.