ಕರ್ನಾಟಕ

karnataka

ETV Bharat / state

ಬೀದರ್​ ಜಿಲ್ಲೆಯಲ್ಲಿ ಅಬ್ಬರಿಸಿದ ವರುಣ: ಗದ್ದೆಗಳಿಗೆ ನೀರು ನುಗ್ಗಿ ಬೆಳೆ ಹಾನಿ - Heavy rains in Bidar

ಬೀದರ್​ ಜಿಲ್ಲೆಯಲ್ಲಿ ವರುಣ ಅಬ್ಬರಿಸುತ್ತಿದ್ದು, ಔರಾದ್ ತಾಲೂಕಿನ ಕೆಲವು ಗ್ರಾಮಗಳಲ್ಲಿ ಮಳೆ ಅವಾಂತರ ಸೃಷ್ಟಿಸಿದೆ. ಅಲ್ಲದೇ ರೈತರು ಬೆಳೆದ ಸೋಯಾಬಿನ್, ತೊಗರಿ, ಹೆಸರು, ಉದ್ದು, ಜೋಳ ಮಳೆ ನೀರಿಗೆ ಕೊಚ್ಚಿಕೊಂಡು ಹೋಗಿವೆ.

Heavy rains in Bidar
ಬೀದರ್​ನಲ್ಲಿ ಭಾರೀ ಮಳೆ

By

Published : Jul 29, 2020, 7:32 PM IST

ಬೀದರ್:ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಔರಾದ್ ತಾಲೂಕಿನ ಕೆಲವು ಗ್ರಾಮಗಳಲ್ಲಿ ಮಳೆ ಅವಾಂತರ ಸೃಷ್ಟಿಸಿದೆ.

ಬೀದರ್​ ಜಿಲ್ಲೆಯಲ್ಲಿ ಭಾರೀ ಮಳೆ

ಜಿಲ್ಲೆಯ ಔರಾದ್ ತಾಲೂಕಿನ ಜಂಬಗಿ, ಕಂದಗೂಳ, ವಡಗಾಂವ್, ಕಾರವಾರ ತಾಂಡ ಭಾಗದಲ್ಲಿ ಸತತ ನಾಲ್ಕು ಗಂಟೆಗಳ ಕಾಲ ಸುರಿದ ಮಳೆಯಿಂದಾಗಿ ನೀರು ಮನೆಗಳಿಗೆ ನುಗ್ಗಿ ಅಪಾರ ಹಾನಿಯುಂಟು ಮಾಡಿದೆ‌.

ಜಂಬಗಿ ಗ್ರಾಮದ ತೆಲಂಗಾಣ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ಮೇಲಿಂದ ನೀರು ಹರಿದು ಕೆಲಕಾಲ ಸಂಚಾರ ಸಂಪೂರ್ಣ ಸ್ತಬ್ದವಾಗಿತ್ತು. ಅಲ್ಲದೇ ರೈತರು ಬೆಳೆದ ಸೋಯಾಬಿನ್, ತೊಗರಿ, ಹೆಸರು, ಉದ್ದು, ಜೋಳ ಮಳೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದು, ಅನ್ನದಾತರು ಕಂಗಾಲಾಗಿದ್ದಾರೆ.

ABOUT THE AUTHOR

...view details