ಬಸವಕಲ್ಯಾಣ: ಕುಮಾರಸ್ವಾಮಿ ಸರ್ಕಾರದಿಂದ ಘೋಷಣೆ ಮಾಡಲಾದ ರೈತರ ಸಾಲ ಸಂಪೂರ್ಣ ಮನ್ನಾ ಮಾಡುವ ಜೊತೆಗೆ ಹೆಚ್ಚಿನ ಸಾಲ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಒತ್ತಾಯಿಸಿದೆ.
ಬಸವಕಲ್ಯಾಣ: ಹೆಚ್ಡಿಕೆ ಸರ್ಕಾರದ ಸಾಲ ಮನ್ನಾ ಯೋಜನೆ ಜಾರಿಗೆ ಒತ್ತಾಯ
ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಬಿತ್ತಿದ ಸೋಯಾಬಿನ್ ಬೀಜ ಮೊಳಕೆ ಒಡೆಯದೇ ರೈತರು ಕಂಗಾಲಾಗಿದ್ದಾರೆ. ಹಾನಿ ಕುರಿತು ಸಮೀಕ್ಷೆ ನಡೆಸಿ ಸರ್ಕಾರದಿಂದ ಪರಿಹಾರ ಕಲ್ಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಸವಕಲ್ಯಾಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಒತ್ತಾಯಿಸಿದೆ.
ಹೆಚ್ಡಿಕೆ ಸರ್ಕಾರದ ಸಾಲ ಮನ್ನಾ ಯೋಜನೆ ಜಾರಿಗೆ ತರುವಂತೆ ಒತ್ತಾಯ
ಸಂಘದ ತಾಲೂಕು ಹಾಗೂ ವಿವಿಧ ಗ್ರಾಮ ಘಟಕಗಳ ಪದಾಧಿಕಾರಿಗಳ ನಿಯೋಗ ಮಿನಿ ವಿಧಾನಸೌಧಕ್ಕೆ ತೆರಳಿ ಬೇಡಿಕೆ ಕುರಿತು ಸಹಾಯಕ ಆಯುಕ್ತರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ಗೆ ಸಲ್ಲಿಸಲಾಯಿತು.
ತಾಲೂಕಿನಲ್ಲಿ ಹೆಚ್ಚಿನ ಮಳೆಯಿಂದಾಗಿ ಹಲವೆಡೆ ಸಮರ್ಪಕವಾಗಿ ತೊಗರಿ ಮೊಳಕೆಯೊಡೆದಿಲ್ಲ. ಹೀಗಾಗಿ ರೈತರು ಸಮಸ್ಯೆಗೆ ಸಿಲುಕಿದ್ದು, ಸರ್ಕಾರದಿಂದ ಪರಿಹಾರ ಕಲ್ಪಿಸಬೇಕು. ಜಿಲ್ಲೆಯ ರೈತರ ಜೀವನಾಡಿಯಾಗಿರುವ ಬಿಎಸ್ಎಸ್ಕೆ ಪ್ರಾರಂಭಿಸಲು ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಲಾಗಿದೆ.