ಬೀದರ್:ತೆಲಂಗಾಣ ರಾಜ್ಯದ ಗಡಿ ಮೂಲಕ ಮಹಾರಾಷ್ಟ್ರಕ್ಕೆ ಗಾಂಜಾ ಸಾಗಣೆ ಮಾಡುತ್ತಿದ್ದ ಅಂತರರಾಜ್ಯ ಗಾಂಜಾ ಪೆಡ್ಲರ್ನನ್ನು ಬಂಧಿಸಿರುವ ಜಿಲ್ಲಾ ಪೊಲೀಸರು ಆರೋಪಿಯಿಂದ 5 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ.
5 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ: ಅಂತರರಾಜ್ಯ ಪೆಡ್ಲರ್ ಬಂಧನ! - ಅಂತರಾಜ್ಯ ಗಾಂಜಾ ಪೆಡ್ಲರ್ ಬಂಧಿಸಿದ ಬೀದರ್ ಪೊಲೀಸರು
ರಾಜ್ಯದ ಗಡಿ ಮೂಲಕ ತೆಲಂಗಾಣದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬೀದರ್ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನಿಂದ 5 ಲಕ್ಷ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಅಂತರಾಜ್ಯ ಗಾಂಜಾ ಪೆಡ್ಲರ್ ಬಂಧನ
ತಾಲೂಕಿನ ನವಲಸಪೂರ್ ಗ್ರಾಮದ ಬಳಿ ಜನವಾಡ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಅಡ್ಡ ರಸ್ತೆಗಳ ಮೂಲಕ ತೆಲಂಗಾಣದ ಸಂಗಾರೆಡ್ಡಿಯಿಂದ ಬಿಳಿ ಸ್ವಿಫ್ಟ್ ಕಾರಿನಲ್ಲಿ 50 ಕೆ.ಜಿ ಗಾಂಜಾ ಸಾಗಣೆ ಮಾಡ್ತಿದ್ದರು. ಔರಾದ್ ತಾಲೂಕಿನ ವಡಗಾಂವ್ ಮೂಲಕ ಮಹಾರಾಷ್ಟ್ರ ರಾಜ್ಯಕ್ಕೆ ತೆರಳುತ್ತಿದ್ದಾಗ ಆರೋಪಿ ದೇವಿದಾಸ್ ರಾಠೋಡ್ ಸಮೇತ 5 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿಕೊಂಡಿದ್ದಾರೆ.
ಈ ಕುರಿತು ಜನವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Oct 1, 2020, 10:11 PM IST