ಬೀದರ್:ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಜಿಲ್ಲೆಯ ಭಾಲ್ಕಿ ತಾಲೂಕಿನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೊಜನೆಯಡಿ ನಡೆಯುತ್ತಿರುವ ಕಾಮಗಾರಿ ಪರಿಶೀಲನೆ ನಡೆಸಿದರು.
ಭಾಲ್ಕಿ ಪಟ್ಟಣದಲ್ಲಿ ಕಾಮಗಾರಿ ಪರಿಶೀಲಿಸಿದ ಈಶ್ವರ್ ಖಂಡ್ರೆ - ಈಶ್ವರ ಖಂಡ್ರೆ ಲೇಟೆಸ್ಟ್ ನ್ಯೂಸ್
ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಜಿಲ್ಲೆಯ ಭಾಲ್ಕಿ ತಾಲೂಕಿನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೊಜನೆಯಡಿ ನಡೆಯುತ್ತಿರುವ ಕಾಮಗಾರಿ ಪರಿಶೀಲನೆ ನಡೆಸಿದರು.
ಜಿಲ್ಲೆಯ ಭಾಲ್ಕಿ ತಾಲೂಕಿನ ಮೇತಿ ಮೆಳಕುಂದಾ, ಧನ್ನೂರ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೊಜನೆ ಅಡಿಯಲ್ಲಿ ನಡೆಯುತ್ತಿರುವ ಕಾಮಗಾರಿ ಪರಿಶೀಲನೆ ನಡೆಸಿದರು.
ಬಳಿಕ ಮಾತನಾಡಿದ ಅವರು, ಇಡೀ ಜಗತ್ತು ಕೊರೊನಾದಿಂದ ತತ್ತರಿಸಿದ್ದು, ಸಾಕಷ್ಟು ಜನರು ಸಾವನ್ನಪ್ಪಿದ್ದಾರೆ. ಅದರಿಂದ ಜನರು ಬಹಳ ಎಚ್ಚರಿಕೆಯಿಂದ ಇರಬೇಕು. ಸರ್ಕಾರದ ನಿಯಮಗಳನ್ನು ಪಾಲಿಸಬೇಕು. ಸಾಮಾಜಿಕ ಅಂರತವನ್ನು ಕಾಯ್ದುಕೊಂಡು ಕೆಲಸ ನಿರ್ವಹಿಸಬೇಕು. ಯೋಜನೆಯಡಿ ದುಡಿಯುತ್ತಿರುವ ಕೂಲಿ ಕಾರ್ಮಿಕರಿಗೆ ಸಕಾಲಕ್ಕೆ ಹಣ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವಂತೆ ಪಂಚಾಯತ್ ಅಧಿಕಾರಿಗಳಿಗೆ ಸೂಚಿಸಿದರು.