ಕರ್ನಾಟಕ

karnataka

ETV Bharat / state

31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಜಾಥಾ - undefined

ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಮತ್ತು ಸಂಚಾರಿ ಪೊಲೀಸ್ ಠಾಣೆ ವತಿಯಿಂದ 31ನೇ ರಾಷ್ಟ್ರೀಯ ರಸ್ತೆ ಸುರಕ್ಷಿತ ಸಪ್ತಾಹದ ನಿಮಿತ್ತ ವಿವಿಧ ಕಾರ್ಯಕ್ರಮಗಳ ಮೂಲಕ ಜನ ಜಾಗೃತಿ ಮೂಡಿಸಲಾಯಿತು.

jatha-as-part-of-the-31st-national-road-safety-week
31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಜಾಥಾ

By

Published : Jan 18, 2020, 7:30 AM IST

ಬಸವಕಲ್ಯಾಣ:31ನೇ ರಾಷ್ಟ್ರೀಯ ಸಪ್ತಾಹ ಅಂಗವಾಗಿ ಯಾದಗಿರಿ ಹಾಗೂ ಬೀದರ್​ ಜಿಲ್ಲೆಯ ಬಸವಕಲ್ಯಾಣದಲ್ಲಿ ಜನ ಜಾಗೃತಿ ಜಾಥಾ ನಡೆಸಲಾಯಿತು.

31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಜಾಥಾ

ನಮ್ಮ ದೇಶದಲ್ಲಿ ನಡೆಯುತ್ತಿರುವ ರಸ್ತೆ ಅಪಘಾತಗಳಿಂದ ಪ್ರತಿನಿತ್ಯ 400ಕ್ಕೂ ಅಧಿಕ ಸವಾರರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ವರ್ಷದಲ್ಲಿ 1.5 ಲಕ್ಷ ಜನ ಅಪಘಾತದಲ್ಲಿ ಸಾವನ್ನಪ್ಪುತ್ತಾರೆ. 15 ಲಕ್ಷ ಜನರು ಕೈ, ಕಾಲು ಮುರಿದುಕೊಳ್ಳುತಿದ್ದಾರೆ. ಇದಕ್ಕೆಲ್ಲ ಚಾಹನ ಚಾಲಕರ ನಿರ್ಲಕ್ಷ್ಯವೇ ಪ್ರಮುಖ ಕಾರಣ ಎಂದು ಆರ್​ಟಿಒ ಅಧಿಕಾರಿ ಬಿರಾದರ್ ಹೇಳಿದರು.

ಯಾದಗಿರಿ:ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಮತ್ತು ಸಂಚಾರಿ ಪೊಲೀಸ್ ಠಾಣೆ ವತಿಯಿಂದ 31ನೇ ರಾಷ್ಟ್ರೀಯ ರಸ್ತೆ ಸುರಕ್ಷಿತ ಸಪ್ತಾಹದ ನಿಮಿತ್ತ ವಿವಿಧ ಕಾರ್ಯಕ್ರಮಗಳ ಮೂಲಕ ಜನ ಜಾಗೃತಿ ಮೂಡಿಸಲಾಯಿತು.

ನಗರದ ತಹಶೀಲ್ದಾರ್ ಕಚೇರಿಯಿಂದ ಪ್ರಮುಖ ರಸ್ತೆಗಳಲ್ಲಿ ಜನ ಜಾಗೃತಿ ಜಾಥಾ ನಡೆಸಲಾಯಿತು. ಈ ಜಾಥಾಗೆ ಸಾರಿಗೆ ಇಲಾಖೆ ಕಲಬುರಗಿ ವಿಭಾಗ ಜಂಟಿ‌ ಕಾರ್ಯದರ್ಶಿ ಆಯುಕ್ತೆ ಎಂ.ಪಿ.ಓಂಕಾರೇಶ್ವರಿ ಚಾಲನೆ ನೀಡಿದರು.

ನಗರದ ಹೊಸ ಬಸ್ ನಿಲ್ದಾಣದ ಕಾರ್ಯಕ್ರಮದಲ್ಲಿ ರಸ್ತೆ ಸಂಚಾರ ಮಾಡುವಾಗ ವಾಹನ ಸವಾರರು ಅನುಸರಿಸಬೇಕಾದ ನಿಯಮಗಳ ಬಗ್ಗೆ ಎಸ್​ಪಿ ಋಷಿಕೇಶ್ ಭಗವಾನ್ ಪ್ರಯಾಣಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

For All Latest Updates

TAGGED:

ABOUT THE AUTHOR

...view details