ಬೀದರ್:ಕೋವಿಡ್-19 ಸಂದರ್ಭದಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ನಾಲ್ಕು ಕಾಯ್ದೆಗಳಿಗೆ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ಜೆಡಿಎಸ್ ಮುಖಂಡ ಬಂಡೆಪ್ಪ ಕಾಶೆಂಪೂರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಬೀದರ್: ಜನವಿರೋಧಿ ಕಾಯ್ದೆ ಜಾರಿ ವಿರೋಧಿಸಿ ಜೆಡಿಎಸ್ ಪ್ರತಿಭಟನೆ - JDS protests against state government
ಸರ್ಕಾರ ಈ ಕೂಡಲೆ ರೈತ ವಿರೋಧಿ ಸುಗ್ರೀವಾಜ್ಞೆ ಹಿಂಪಡೆಯಬೇಕು. ಇಲ್ಲದಿದ್ದರೆ ಮುಂದಿನ ಅಧಿವೇಶನದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಕಾಶೆಂಪೂರ್ ಎಚ್ಚರಿಕೆ ನೀಡಿದರು.
ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ
ನಗರದ ಜೆಡಿಎಸ್ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯ ಸರ್ಕಾರ ತಂದಿರುವ 1961 ರ ಕರ್ನಾಟಕ ಭೂ ಸುಧಾರಣೆ ಕಾಯ್ದೆ, 1966 ರ ಕೃಷಿ ಉತ್ಪನ್ನ ಮಾರುಕಟ್ಟೆ ಕಾಯ್ದೆ, 1947 ರ ಕೈಗಾರಿಕಾ ವ್ಯಾಜ್ಯ ಕಾಯ್ದೆ, 1947 ರ ಕಾರ್ಖಾನೆ ಕಾಯ್ದೆಗಳ ವಿರುದ್ಧ ಮುಂದಿನ ಅಧಿವೇಶನದಲ್ಲಿ ಧ್ವನಿ ಎತ್ತುತ್ತೇವೆ ಎಂದು ಬಂಡೆಪ್ಪ ಕಾಶೆಂಪೂರ್ ಹೇಳಿದರು.
ಸರ್ಕಾರ ಈ ಕೂಡಲೇ ರೈತ ವಿರೋಧಿ ಸುಗ್ರೀವಾಜ್ಞೆ ಹಿಂಪಡೆಯಬೇಕು. ಇಲ್ಲದಿದ್ದರೆ ಮುಂದಿನ ಅಧಿವೇಶನದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಕಾಶೆಂಪೂರ್ ಎಚ್ಚರಿಕೆ ನೀಡಿದರು.
Last Updated : Aug 28, 2020, 11:21 PM IST
TAGGED:
JDS protests