ಕರ್ನಾಟಕ

karnataka

ETV Bharat / state

ಬೀದರ್​ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿಇಲಾಖೆಯಲ್ಲಿ ಉದ್ಯೋಗಾವಕಾಶ; ಪದವಿ ಆದವರಿಗೆ ಚಾನ್ಸ್​​​ - ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ

ಕೇಂದ್ರದ ಪೋಷಣ್​​ ಯೋಜನೆಗೆ ಗುತ್ತಿಗೆ ಆಧಾರದ ಮೇಲೆ ಈ ಹುದ್ದೆ ನೇಮಕಾತಿ ನಡೆಯಲಿದೆ.

Job Opportunity in Bidar Women and Child Welfare Development
Job Opportunity in Bidar Women and Child Welfare Development

By ETV Bharat Karnataka Team

Published : Oct 13, 2023, 2:08 PM IST

ಬೀದರ್​ನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪೋಷಣ್​ ಅಭಿಯಾನ ಯೋಜನೆ ಅಡಿ ಈ ಹುದ್ದೆಗಳ ನೇಮಕಾತಿ ನಡೆಸಲಾಗುವುದು. ಒಟ್ಟು 3 ಹುದ್ದೆಗಳ ಭರ್ತಿ ನಡೆಸಲಾಗುವುದು. ಈ ಹುದ್ದೆಗಳು ಸಂಪೂರ್ಣವಾಗಿ ತಾತ್ಕಾಲಿಕವಾಗಿದ್ದು, ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಸಲಾಗುವುದು ಎಂದು ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಅಧಿಸೂಚನೆ

ಹುದ್ದೆ ವಿವರ ನೋಡುವುದಾದರೆ:

  • ಬೀದರ್​ನಲ್ಲಿ ಜಿಲ್ಲಾ ಪಟ್ಟದಲ್ಲಿ ಕಾರ್ಯಕ್ರಮ ಸಹಾಯಕರು 1
  • ಭಾಲ್ಕಿ ಶಿಶು ಅಭಿವೃದ್ಧಿ ಯೋಜನೆಯ ಅಡಿ ತಾಲೂಕು ಸಂಯೋಜಕರ ಹುದ್ದೆ -1
  • ಸಂತಪೂರ್​ನಲ್ಲಿ ಶಿಶು ಅಭಿವೃದ್ಧಿ ಯೋಜನೆ ಅಡಿ ತಾಲೂಕು ಸಂಯೋಜಕರ ಹುದ್ದೆ 1

ವಿದ್ಯಾರ್ಹತೆ:

  • ಕಾರ್ಯಕ್ರಮ ಸಹಾಯಕರು: ಅಧಿಕೃತ ಮಂಡಳಿಯಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು
  • ಬ್ಲಾಕ್​ ಪ್ರೊಜೆಕ್ಟ್​​ ಅಸಿಸ್ಟೆಂಟ್​​: ಅಧಿಕೃತ ಮಂಡಳಿಯಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು
  • ಅಭ್ಯರ್ಥಿಗಳು ಸಾಮಾಜಿಕ ಕಾರ್ಯಕ್ರಮದಲ್ಲಿ 3 ವರ್ಷ ಹುದ್ದೆ ಅನುಭವ ಹೊಂದಿರಬೇಕು.

ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 21 ವರ್ಷದಿಂದ ಗರಿಷ್ಠ 45 ವರ್ಷದೊಳಗಿನವರಾಗಿರಬೇಕು.

ಆಯ್ಕೆ ಪ್ರಕ್ರಿಯೆ: ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಹುದ್ದೆಗೆ ಆಯ್ಕೆ ಮಾಡಲಾಗುವುದು.

ವೇತನ: ಜಿಲ್ಲಾ ಯೋಜನಾ ಸಹಾಯಕರಿಗೆ 18,000 ಮತ್ತು ಬ್ಲಾಕ್​ ಪ್ರೊಜೆಕ್ಟ್​​ ಸಹಾಯಕರಿಗೆ 20000 ರೂ ಮಾಸಿಕ ವೇತನ ನಿಗದಿ ಪಡಿಸಲಾಗಿದೆ.

ಅರ್ಜಿ ಸಲ್ಲಿಕೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಭರ್ತಿ ಮಾಡಲಾಗುವುದು. ನಿಗದಿತ ಅರ್ಜಿ ಜೊತೆಯಲ್ಲಿ ಎಸ್​ಎಸ್​ಎಲ್​ಸಿ ಅಂಕಪಟ್ಟಿ, ವಿದ್ಯಾರ್ಹತೆ ಅಂಕಪಟ್ಟಿ, ಅನುಭವ ಪ್ರಮಾಣ ಪತ್ರ, ಕಂಪ್ಯೂಟರ್​ ತರಬೇತಿ ಪ್ರಮಾಣ ಪತ್ರ, ತಹಶೀಲ್ದಾರ್​​ರಿಂದ ವಾಸಸ್ಥಳ ಪ್ರಮಾಣಪತ್ರವನ್ನು ಈ ಕೆಳಗಿನ ವಿಳಾಸಕ್ಕೆ ನಿಗದಿತ ದಿನಾಂಕಕ್ಕೆ ಮುನ್ನವಾಗಿ ಖುದ್ದು ಅಥವಾ ಅಂಚೆ ಮೂಲಕ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ:

ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಲ್ಯಾಂಡ್​ ಆರ್ಮಿ ಆಫೀಸ್​ ಹಿಂದುಗಡೆ, ಮೈಲೂರು ರಸ್ತೆ, ಬೀದರ್​​.

ಈ ಹುದ್ದೆಗೆ ಅಭ್ಯರ್ಥಿಗಳು ಅಕ್ಟೋಬರ್​ 10ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್​​ 16 ಆಗಿದೆ.

ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು bidar.nic.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ:ಚಾಮರಾಜನಗರ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ; ಸ್ಟೆನೋಗ್ರಾಫರ್​ ಹುದ್ದೆಗೆ ಅರ್ಜಿ ಆಹ್ವಾನ‘

ABOUT THE AUTHOR

...view details