ಬೀದರ್:ಮಾಜಿ ಸಿಎಂ ಸಿದ್ದರಾಮಯ್ಯ ಹೇಳೋದೆಲ್ಲಾ ಉಲ್ಟಾ ಆಗುತ್ತೆ. ಈ ಬಾರಿ ಉಪ ಚುನಾವಣೆಯ ಫಲಿತಾಂಶ ಕೂಡ ಸಿದ್ದರಾಮಯ್ಯ ಪಾಲಿಗೆ ಉಲ್ಟಾ ಆಗಲಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ನರೇಂದ್ರ ಮೋದಿ ಪ್ರಧಾನಿ ಆಗಲ್ಲ. ಕುಮಾರಸ್ವಾಮಿ ಅವರಪ್ಪನಾಣೆಗೂ ಸಿಎಂ ಆಗಲ್ಲ ಹಾಗೂ ಬಿ.ಎಸ್.ಯಡಿಯೂರಪ್ಪ ಸಿಎಂ ಆಗಲ್ಲ ಎಂದು ಹೇಳಿದ್ದ ಸಿದ್ದರಾಮಯ್ಯ ಅವರ ಹೇಳಿಕೆಗಳೆಲ್ಲವೂ ಉಲ್ಟಾ ಆಗಿಲ್ಲವೇ ಎಂದು ಪ್ರಶ್ನಿಸಿದ್ರು.
ಪ್ರಧಾನಿ ನರೇಂದ್ರ ಮೋದಿ ಮತ್ತೆ ಪ್ರಧಾನಿ ಆದ್ರು, ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಸಿದ್ದರಾಮಯ್ಯ ಅವರೇ ಕರೆದುಕೊಂಡು ಹೋಗಿ ಸಿಎಂ ಮಾಡಿಸಿದ್ದಾರೆ. ಬಿಎಸ್ವೈ ಇದೀಗ ಸಿಎಂ ಆಗಿ ಅಧಿಕಾರದಲ್ಲಿ ಇದ್ದಾರೆ ಎಂದರು. ಅದೇ ರೀತಿ ಈ ಬಾರಿ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದಿಲ್ಲ. ಚುನಾವಣೆ ನಂತರ ಬಿಎಸ್ವೈ ಸರ್ಕಾರ ಪತನ ಗ್ಯಾರಂಟಿ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಇದು ಕೂಡ ಉಲ್ಟಾ ಆಗಲಿದೆ ಎಂದರು.