ಬಸವಕಲ್ಯಾಣ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಿರ್ವಾಹಕರು ಮತ್ತು ಚಾಲಕರಿಗೆ ಮಾಸ್ಕ್, ಹ್ಯಾಂಡ್ಗ್ಲೌಸ್ ಜತೆಗೆ ಪ್ರತಿಯೊಂದು ಬಸ್‌ಗಳಲ್ಲಿ ಹ್ಯಾಂಡ್ ಸ್ಯಾನಿಟೈಸರ್ನ್ನು ಕಡ್ಡಾಯವಾಗಿ ನೀಡಬೇಕು ಎಂದು ಕರ್ನಾಟಕ ದಲಿತ ರಕ್ಷಣಾ ವೇದಿಕೆ ತಾಲೂಕು ಘಟಕ ಮನವಿ ಮಾಡಿದೆ.
ವೇದಿಕೆ ಪದಾಧಿಕಾರಿಗಳ ನಿಯೋಗದಿಂದ ಇಲ್ಲಿಯ ಮಿನಿ ವಿಧಾನ ಸೌಧಕ್ಕೆ ತೆರಳಿ ಬೇಡಿಕೆ ಕುರಿತು ರಾಜ್ಯ ಸಾರಿಗೆ ಸಚಿವರು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಿಗೆ ಬರೆದ ಮನವಿ ಪತ್ರವನ್ನು ಉಪ ತಹಶಿಲ್ದಾರ ಶಿವಾನಂದ ಮೇತ್ರೆ ಅವರಿಗೆ ಸಲ್ಲಿಸಲಾಯಿತು.
ಬಸ್ ಚಾಲಕ, ನಿರ್ವಾಹಕರಿಗೆ ಮಾಸ್ಕ್ ನೀಡಲು ಒತ್ತಾಯಿಸಿದ ಕರ್ನಾಟಕ ದಲಿತ ರಕ್ಷಣಾ ವೇದಿಕೆ ದಲಿತ ರಕ್ಷಣಾ ವೇದಿಕೆ ತಾಲೂಕು ಕಾರ್ಯದರ್ಶಿ ಪಿಂಟು ಕಾಂಬಳೆ ಮಾತನಾಡಿ, ನಿರ್ವಾಹಕರು ಟಿಕೆಟ್ ನೀಡುವ ಮತ್ತು ಹಣ ಪಡೆದು ಚಿಲ್ಲರೇ ವಾಪಸ್ ನೀಡುವಾಗ ಪ್ರಯಾಣಿಕರನ್ನು ಮುಟ್ಟಲೇಬೇಕಾತ್ತದೆ. ಪ್ರಯಾಣಿಕರಲ್ಲಿ ಯಾರಿಗಾದರೂ ಒಂದು ವೇಳೆ ಈ ಸೋಂಕು ಇದ್ದಲ್ಲಿ ಸಮಸ್ಯೆಯಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ಸಾರಿಗೆ ಇಲಾಖೆಯ ನಿರ್ವಾಹಕರು ಮತ್ತು ಚಾಲಕರಿಗೆ ಮಾಸ್ಕ್, ಹ್ಯಾಂಡ್ಗ್ಲೌಸ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ 24 ಗಂಟೆಗಳ ಕಾಲ ಸೇವೆ ಸಲ್ಲಿಸುವಂತೆ ಸಾರಿಗೆ ಇಲಾಖೆಯು ಕೂಡಾ ದಿನವಿಡಿ ಕಾರ್ಯನಿರ್ವಹಿಸುತ್ತಿದೆ. ಆದರೆ ಕೊರೊನಾ ಭೀತಿ ಹಿನ್ನೆಲೆಯಲ್ಲಿ ವೈದ್ಯಕೀಯ ಇಲಾಖೆಯ ಸಿಬ್ಬಂದಿಗಳಿಗೆ ನೀಡಿದಂತಹ ಸುರಕ್ಷಾ ವಸ್ತುಗಳ ಪೈಕಿ ಮಾಸ್ಕ್, ಹ್ಯಾಂಡ್ ಗ್ಲೋಸ್ ಮತ್ತು ಹ್ಯಾಂಡ್ ಸ್ಯಾನಿಟೈಸರ್‌ಗಳನ್ನು ಸಾರಿಗೆ ಇಲಾಖೆಯ ಸಿಬ್ಬಂದಿಗಳಿಗೆ ಸರ್ಕಾರ ನೀಡಬೇಕು ಎಂದು ಕೋರಿದ್ದಾರೆ.