ಕರ್ನಾಟಕ

karnataka

ಸುಪ್ರೀಯಾ ರಾಠೋಡ ಮನೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಭೇಟಿ, ಸಾಂತ್ವನ

By

Published : Feb 11, 2020, 8:09 PM IST

ಶ್ರಮ ಜೀವಿ ವಸತಿ ಶಾಲೆಯಲ್ಲಿ ನಿಗೂಢವಾಗಿ ಸಾವನಪ್ಪಿರುವ ವಿದ್ಯಾರ್ಥಿನಿ ಸುಪ್ರೀಯಾ ರಾಠೋಡ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆಗ್ರಹಿಸಿದ್ದಾರೆ.

KPCC president Ishwar Khandre visits Supriya Rathod's home
ಸುಪ್ರೀಯಾ ರಾಠೋಡ ಮನೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಭೇಟಿ.. ಸಾಂತ್ವನ

ಬೀದರ್:ಶ್ರಮ ಜೀವಿ ವಸತಿ ಶಾಲೆಯಲ್ಲಿ ನಿಗೂಢವಾಗಿ ಸಾವನಪ್ಪಿರುವ ವಿದ್ಯಾರ್ಥಿನಿ ಸುಪ್ರೀಯಾ ರಾಠೋಡ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆಗ್ರಹಿಸಿದ್ದಾರೆ.

ಸುಪ್ರೀಯಾ ರಾಠೋಡ ಮನೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಭೇಟಿ

ಜಿಲ್ಲೆಯ ಔರಾದ್ ತಾಲೂಕಿನ ನರಸಿಂಹಪೂರ್ ತಾಂಡದಲ್ಲಿರುವ ಮೃತ ಸುಪ್ರೀಯಾ ರಾಠೋಡ ಪೋಷಕರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದ ಈಶ್ವರ ಖಂಡ್ರೆ, ಈ ಪ್ರಕರಣವನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸುವ ಮೂಲಕ ಮೃತ ಸುಪ್ರೀಯಾ ಕುಟುಂಬಸ್ಥರಿಗೆ ನ್ಯಾಯ ಒದಗಿಸಿಕೊಡುವುದಾಗಿ ಭರವಸೆ ನೀಡಿದರು. ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ವಸತಿ ಶಾಲೆಯ ಕೊಠಡಿಯಲ್ಲಿ ಮೃತದೇಹ ಪತ್ತೆಯಾಗಿದೆ. ಇದೊಂದು ಅಸಾಮಾನ್ಯ ಸಾವಾಗಿದ್ದು, ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿಯದೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥ ಶಾಲೆಯ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆಯಲ್ಲಿ ಮೃತ ಸುಪ್ರೀಯಾ ತಂದೆ ಸಂಜೀವ ಕುಮಾರ್ ರಾಠೋಡ ಅವರಿಗೆ 50 ಸಾವಿರ ರುಪಾಯಿ ಸಹಾಯಧನ ನೀಡುವ ಮೂಲಕ ಬಡ ಕುಟುಂಬಕ್ಕೆ ಆರ್ಥಿಕವಾಗಿ ಧೈರ್ಯ ತುಂಬಿದರು.

ABOUT THE AUTHOR

...view details