ಬೀದರ್/ನವ ದೆಹಲಿ:ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯಲ್ಲಿರುವ ಕುರುಬ ಸಮುದಾಯದವರನ್ನು ಎಸ್‌ಟಿ ಗೊಂಡ ಪಟ್ಟಿಗೆ ಸೇರಿಸಬೇಕೆಂದು ಒತ್ತಾಯಿಸಿ ಸಚಿವ ಭಗವಂತ ಖೂಬಾ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಕರ್ನಾಟಕ ವಿಧಾನಪರಿಷತ್ ಸಭಾಧ್ಯಕ್ಷ ರಘುನಾಥರಾವ್ ಮಲ್ಕಾಪುರೆ, ಶಾಸಕ ಬಂಡೆಪ್ಪ ಖಾಶೆಂಪುರ್, ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಹಾಗೂ ಸಂಬಂಧಪಟ್ಟಂತೆ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಈ ವಿಚಾರವನ್ನು ಖೂಬಾ ಚರ್ಚಿಸಿದ್ದಾರೆ.