ಬಸವಕಲ್ಯಾಣ: ಕೊರೊನಾ ಹರಡುವ ಭೀತಿ ಹಿನ್ನೆಲೆಯಲ್ಲಿ ಜಾರಿಗೊಳಿಸಲಾದ ಲಾಕ್ಡೌನ್ ಆದೇಶ ಉಲ್ಲಂಘಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದರೆನ್ನಲಾದ 8 ಜನರ ವಿರುದ್ಧ ಇಲ್ಲಿಯ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದ ಬಸ್ ನಿಲ್ದಾಣ ಸಮೀಪದ ಮಸೀದಿಯೊಂದರಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸುತ್ತಿದ್ದಾರೆ ಎನ್ನುವ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ಸಾವಿತ್ರಿ ಸಲಗರ್ ಹಾಗೂ ಸಿಪಿಐ ಮಲ್ಲಿಕಾರ್ಜುನ ಯಾತನೂರ, ಪಿಎಸ್ಐ ಸುನಿಲಕುಮಾರ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ, ಸಾಮೂಹಿಕ ಪ್ರಾರ್ಥನೆ ಸಲ್ಲಿಸುತಿದ್ದ 8 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.