ಬೀದರ್: ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಬೀದರ್ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ - ಬೀದರ್ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬಸವಕಲ್ಯಾಣ ನಿವಾಸಿಯಾದ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬೀದರ್ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ನಗರದ ಬ್ರೀಮ್ಸ್ ಕಾಲೇಜಿನಲ್ಲಿ ವಿನೀತ ಕಾಂಬಳೆ (24) ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಸವಕಲ್ಯಾಣ ನಿವಾಸಿಯಾದ ವಿನೀತ್ ಎಂಬಿಬಿಎಸ್ ಫೈನಲ್ ವರ್ಷದಲ್ಲಿ ವ್ಯಾಸಂಗ ಮಾಡ್ತಿದ್ದ ಎನ್ನಲಾಗಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ನ್ಯೂಟೌನ್ ಪೊಲೀಸರು ಭೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ.