ಯುಜಿಡಿ ಕಾಮಗಾರಿ ಪರಿಶೀಲಿಸಿದ ಸಚಿವ ಬಿ.ಎ. ಬಸವರಾಜ್: ಕಳಪೆ ಕಾಮಗಾರಿಗೆ ಅಸಮಾಧಾನ
ಬೀದರ್ ನಗರದ ಹೊರವಲಯದ ಗೊರನಳ್ಳಿ ಗ್ರಾಮದ ಬಳಿ ಯುಜಿಡಿ ಕಾಮಗಾರಿಗಳ ಪರಿಶೀಲನೆ ನಡೆಸಿದ ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ್, ಕಳಪೆ ಕಾಮಗಾರಿ ಮಾಡಿದ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯತನಕ್ಕೆ ಬೇಸರ ವ್ಯಕ್ತಪಡಿಸಿದರು.
ಯುಜಿಡಿ ಕಾಮಗಾರಿಗಳ ಪರಿಶೀಲಿಸಿದ ಸಚಿವ ಬಿ.ಎ ಬಸವರಾಜ್
ಬೀದರ್:ನಗರದಲ್ಲಿ ಕುಡಿಯುವ ನೀರಿನೊಂದಿಗೆ ಕೊಳಚೆ ನೀರು ಮಿಶ್ರಿತಗೊಂಡಿರುವುದನ್ನು ಕಂಡು ಸಚಿವ ಬಿ.ಎ. ಬಸವರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರದ ಹೊರವಲಯದ ಗೊರನಳ್ಳಿ ಗ್ರಾಮದ ಬಳಿ ಯುಜಿಡಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಅವರು, ಕಳಪೆ ಕಾಮಗಾರಿ ಮಾಡಿದ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯತನಕ್ಕೆ ಬೇಸರ ವ್ಯಕ್ತಪಡಿಸಿ, ಸ್ಥಳದಲ್ಲೇ ಇದ್ದ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು.