ಬೀದರ್:ತಾಂತ್ರಿಕ ಕಾರಣದ ನೆಪವೊಡ್ಡಿ 16 ಜನ ಮಹಿಳಾ ಪೌರ ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಿದ ಹಿನ್ನೆಲೆ, ಪೌರಕಾರ್ಮಿಕರು ಕಣ್ಣೀರಿಟ್ಟಿದ್ದ ಘಟನೆ ನಡೆದಿತ್ತು. ಈ ಘಟನೆ ಬೆನ್ನಲ್ಲೆ ಪೌರಕಾರ್ಮಿಕರಿಗೆ ಸಚಿವ ಪ್ರಭು ಚವ್ಹಾಣ್ ಸ್ಥಳದಲ್ಲಿಯೇ ನ್ಯಾಯ ಒದಗಿಸಿದ್ದಾರೆ.
ನಗರದ ಅಂಬೇಡ್ಕರ್ ವೃತದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯದಲ್ಲಿ ಇಂದು ನಗರಸಭೆ ವ್ಯಾಪ್ತಿಯಲ್ಲಿ ಕಳೆದ ಹಲವು ತಿಂಗಳಿಂದ ಕೆಲಸ ಮಾಡ್ತಿದ್ದ ಪೌರ ಕಾರ್ಮಿಕರನ್ನು ಗುತ್ತಿಗೆದಾರ ವಜಾ ಮಾಡಿದ್ದರು. ಇದರಿಂದ ಕಂಗಾಲಾದ ಮಹಿಳಾ ಕಾರ್ಮಿಕರು ಸಚಿವ ಪ್ರಭು ಚವ್ಹಾಣ್ ಅವರ ಮುಂದೆ ನೆಲಕ್ಕೆ ಕಾಲು ಬಿದ್ದು ನಮಗೆ ನ್ಯಾಯ ಕೊಡಿ ಎಂದು ಕಣ್ಣಿರು ಹಾಕಿದ್ದಾರೆ. ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಸ್ಥಳದಲ್ಲೇ ಪರಿಹಾರ ನೀಡುವ ಮೂಲಕ ನೊಂದ ಜನರಿಗೆ ನ್ಯಾಯ ನೀಡಿದ ಘಟನೆ ನಡೆದಿದೆ.