ಬೀದರ್: ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯು ವಾರ್ಷೀಕ ಪರಿಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಪ್ರತಿಭಾವಂತ ವಿಧ್ಯಾರ್ಥಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚೌಹಾಣ್ ಸನ್ಮಾನ ಮಾಡುವ ಮೂಲಕ ವೈಯಕ್ತಿಕ ಪ್ರೋತ್ಸಾಹ ಧನ ನೀಡಿದರು.
ನಗರದ ಡಾ. ಚನ್ನಬಸವೇಶ್ವರ ಪಟ್ಟದೇವರು ರಂಗ ಮಂದಿರದಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರಿಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿ ಪಾಸಾದ ವಿಧ್ಯಾರ್ಥಿಗಳಿಗೆ ವೈಯಕ್ತಿಕ ತಲಾ 11,000 ರೂಪಾಯಿ ನಗದು ನೀಡಿದರು. ಇದರ ಜತೆಗೆ ತಾಲೂಕು ಮಟ್ಟದಲ್ಲಿ ಪಾಸಾದ ವಿಧ್ಯಾರ್ಥಿಗಳಿಗೆ ಕ್ರಮೇಣ 7,000 ರೂಪಾಯಿ ನೀಡಿ, ಸನ್ಮಾನ ಮಾಡಿದರು.