ಕರ್ನಾಟಕ

karnataka

ETV Bharat / state

ಅತಿವೃಷ್ಟಿ ಪೀಡಿತ ಪ್ರದೇಶಗಳಗೆ ಸಚಿವ ಪ್ರಭು ಚವ್ಹಾಣ ಭೇಟಿ, ಪರಿಶೀಲನೆ

ಔರಾದ್ ತಾಲ್ಲೂಕಿನ ಕೌಠಾ ಗ್ರಾಮದ ಸೇತುವೆ ಬಳಿ ಮಾಂಜ್ರಾ ನದಿಯ ನೀರಿನ ಮಟ್ಟವನ್ನು ಸಚಿವ ಪ್ರಭು ಚವ್ಹಾಣ ಅವಲೋಕನ ನಡೆಸಿದರು. ನಂತರ ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ ಬಳಿಯ ಕಾರಂಜಾ ಜಲಾಶಯಕ್ಕೆ ಭೇಟಿ ನೀಡಿದ ಸಚಿವರು ಜಲಾಶಯದ ನೀರಿನ ಮಟ್ಟದ ಬಗ್ಗೆ ಮಾಹಿತಿ ಪಡೆದರು.

prabhu-chavan
ಪ್ರಭು ಚವ್ಹಾಣ

By

Published : Oct 16, 2020, 3:55 PM IST

ಬೀದರ್: ಕಳೆದ ಮೂರು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಜಿಲ್ಲೆಯ ಹಲವು ಪ್ರದೇಶಗಳು ಹಾನಿಗೀಡಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ನೆರೆ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಚಿವರು ಔರಾದ್ ತಾಲ್ಲೂಕಿನ ಕೌಠಾ ಗ್ರಾಮದ ಸೇತುವೆ ಬಳಿ ಮಾಂಜ್ರಾ ನದಿಯ ನೀರಿನ ಮಟ್ಟದ ಅವಲೋಕನ ನಡೆಸಿದರು. ನಂತರ ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ ಬಳಿಯ ಕಾರಂಜಾ ಜಲಾಶಯಕ್ಕೆ ಭೇಟಿ ನೀಡಿ ಜಲಾಶಯದ ನೀರಿನ ಮಟ್ಟದ ಬಗ್ಗೆ ಮಾಹಿತಿ ಪಡೆದರು.

ಅತಿವೃಷ್ಠಿಪೀಡಿತ ಪ್ರದೇಶಗಳಗೆ ಸಚಿವ ಪ್ರಭು ಚವ್ಹಾಣ ಪ್ರವಾಸ

ಬಳಿಕ ಮಾತನಾಡಿದ ಅವರು, 'ಬೀದರ್ ಮತ್ತು ಯಾದಗಿರಿ ಜಿಲ್ಲೆಗಳ ಅತಿವೃಷ್ಟಿ ಹಾನಿಯ ಕುರಿತು ಸಿಎಂ ಜೊತೆ ಚರ್ಚಿಸಿ ಪರಿಹಾರ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಎರಡು ಜಿಲ್ಲೆಯ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಅಧಿಕಾರಿಗಳ ತಂಡ ವರದಿ ಸಿದ್ಧಪಡಿಸಿದೆ' ಎಂದರು.

ABOUT THE AUTHOR

...view details