ಕರ್ನಾಟಕ

karnataka

ETV Bharat / state

ಔರಾದ್​ನಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವ..! - ಬೀದರ್​ ಸುದ್ದಿ

ಬೀದರ್​ ಜಿಲ್ಲೆಯ ಔರಾದ್ ವಿಧಾನಸಭೆ ಕ್ಷೇತ್ರದ ನಂದಿ ಬಿಜಲಗಾಂವ್, ದಾಬಕಾ, ದೋಪರವಾಡಿ, ಸೇವಾ ನಾಯಕ ತಾಂಡಾ, ಮುರ್ಕಿ, ಖತಗಾಂವ್, ಮುರಗ (ಕೆ), ಹೋಳಸಮುದ್ರ, ಡೋಂಗರಗಾಂವ್ ಸೇರಿದಂತೆ ವಿವಿಧ ಗ್ರಾಮಗಳಲ್ಲಿ 8.81 ಕೋಟಿ ರೂಪಾಯಿಗಳ ವಿವಿಧ ಕಾಮಗಾರಿಗಳಿಗೆ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಚಾಲನೆ ನೀಡಿದರು.

Minister Prabhu Chavana drive to various works in aurad
ಔರಾದ್​ನಲ್ಲಿ 8.81 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವ..!

By

Published : Jun 21, 2020, 3:32 AM IST

ಬೀದರ್: ಜಿಲ್ಲೆಯ ಔರಾದ್ ವಿಧಾನಸಭೆ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ 8.81 ಕೋಟಿ ರೂಪಾಯಿಗಳ ವಿವಿಧ ಕಾಮಗಾರಿಗಳಿಗೆ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಚಾಲನೆ ನೀಡಿದರು.

ಔರಾದ್​ನಲ್ಲಿ 8.81 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವ..!

ಔರಾದ್ ವಿಧಾನಸಭೆ ಕ್ಷೇತ್ರದ ನಂದಿ ಬಿಜಲಗಾಂವ್, ದಾಬಕಾ, ದೋಪರವಾಡಿ, ಸೇವಾ ನಾಯಕ ತಾಂಡಾ, ಮುರ್ಕಿ, ಖತಗಾಂವ್, ಮುರಗ (ಕೆ), ಹೋಳಸಮುದ್ರ, ಡೋಂಗರಗಾಂವ್ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕಾಮಗಾರಿಗಳಿಗೆ ಸಚಿವ ಪ್ರಭು ಚವ್ಹಾಣ್​ ಭೂಮಿ ಪೂಜೆ ನೆರವೇರಿಸಿದರು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ, ಶಾಸಕರ ಪ್ರದೇಶಾಭಿವೃದ್ಧಿ ನಿಧಿ, ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ, ಪಂಚಾಯತ್ ರಾಜ್ ಎಂಜಿನಿಯರಿಂಗ್, ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಯ ಅನುದಾನದಲ್ಲಿ ಈ ಕಾಮಗಾರಿಗಳನ್ನ ಕೈಗೊಳ್ಳಲಾಗಿದೆ.

ಈ ವೇಳೆ ಮಾತನಾಡಿದ ಅವರು, ಔರಾದ್ ಕ್ಷೇತ್ರದ ಪ್ರತಿಯೊಂದು ಹಳ್ಳಿಯಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಅಧಿಕಾರಿಗಳು ಮತ್ತು ಗುತ್ತಿಗೆದಾರರು ಮುತುವರ್ಜಿ ವಹಿಸಿ, ಗುಣಮಟ್ಟದ ಕೆಲಸ ಮಾಡಬೇಕು ಎಂದು ಸೂಚಿಸಿದರು.

ABOUT THE AUTHOR

...view details