ಕರ್ನಾಟಕ

karnataka

ETV Bharat / state

ಬೀದರ್ ಏರ್ಪೋರ್ಟ್ ಕಾಮಗಾರಿ ಪರಿಶೀಲಿಸಿದ ಸಚಿವರು ಮಾಡಿದ್ದೇನು? - ಬೀದರ್ ಏರ್ಪೋರ್ಟ್

ಬೀದರ್ ನಾಗರಿಕ ವಿಮಾನ ನಿಲ್ದಾಣ ಲೋಕಾರ್ಪಣೆಗೆ ದಿನಗಣನೆ ಆರಂಭವಾಗಿದ್ದು, ಸಚಿವ ಪ್ರಭು ಚವ್ಹಾಣ್ ಹಾಗೂ ಸಂಸದ ಭಗವಂತ ಖೂಬಾ ಅವರು ಏರ್ಪೋರ್ಟ್ ಕಾಮಗಾರಿ ಪರಿಶೀಲನೆ ಮಾಡಿದರು.

Bidar Airport
ಬೀದರ್ ಏರ್ಪೋರ್ಟ್

By

Published : Jan 30, 2020, 7:22 PM IST

ಬೀದರ್: ಬಹು ನಿರೀಕ್ಷಿತ ಬೀದರ್ ನಾಗರಿಕ ವಿಮಾನ ನಿಲ್ದಾಣ ಲೋಕಾರ್ಪಣೆಗೆ ದಿನಗಣನೆ ಆರಂಭವಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಹಾಗೂ ಸಂಸದ ಭಗವಂತ ಖೂಬಾ ಅವರು ಏರ್ಪೋರ್ಟ್ ಕಾಮಗಾರಿ ಪರಿಶೀಲನೆ ನಡೆಸಿದರು.

ಬೀದರ್ ವಿಮಾನ ನಿಲ್ದಾಣಕ್ಕೆ ಭೇಟಿ

ನಗರದ ಚಿದ್ರಿ ರಿಂಗ್ ರೋಡ್​ನಲ್ಲಿ ನಿರ್ಮಾಣವಾಗ್ತಿರುವ ಟರ್ಮಿನಲ್ ಕಾಮಗಾರಿ ವೀಕ್ಷಣೆ ಮಾಡಿದ ಸಚಿವರು ಫೆ.7 ರಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಉಡಾನ್ ಯೋಜನೆಯ ಮೊದಲ ವಿಮಾನ ಹಾರಾಟಕ್ಕೆ ಚಾಲನೆ ನೀಡಲಿದ್ದು, ಸಕಾಲದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮೂಲಸೌಲಭ್ಯ ಅಭಿವೃದ್ಧಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಕಪಿಲ್ ಮೋಹನ್ ಹಾಗೂ ವಿವಿಧ ಅಧಿಕಾರಿಗಳ ಟಿಂ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿದರು. ವಿಮಾನದ ನಿಲ್ದಾಣದ ಬಳಿ ವಾಹನಗಳ ನಿಲುಗಡೆಗೆ ಸೂಕ್ತ ವ್ಯವಸ್ಥೆಯಾಗಬೇಕು. ರಸ್ತೆಗಳ ಬದಿಯಲ್ಲಿ ಗಿಡಗಳನ್ನು ನೆಡುವ ಮೂಲಕ ಆವರಣ ಸುಂದರವಾಗಿ ಕಾಣುವಂತೆ ಮಾಡಬೇಕು. ವಿಮಾನಯಾನ ಸೇವೆ ಉತ್ತಮವಾಗಿ ಲಭ್ಯವಾಗುವಂತಾಗಲು ಎಲ್ಲ ರೀತಿಯ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು ಎಂದು ಸಚಿವ ಪ್ರಭು ಚವ್ಹಾಣ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮೂಲಸೌಲಭ್ಯ ಅಭಿವೃದ್ಧಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಕಪಿಲ್ ಮೋಹನ್ ಅವರು ಮಾತನಾಡಿ, ವಿಮಾನ ನಿಲ್ದಾಣದಲ್ಲಿ ಹೈಸ್ಪೀಡ್ ಇಂಟರ್ನೆಟ್‌ ಸಂಪರ್ಕ ಕಲ್ಪಿಸಬೇಕು. ರಕ್ಷಣೆ ವಿಷಯದಲ್ಲಿ ಯಾವುದೇ ರೀತಿಯ ಲೋಪಗಳು ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. ಜಿಲ್ಲಾಧಿಕಾರಿಗಳಾದ ಡಾ.ಹೆಚ್.ಆರ್.ಮಹಾದೇವ್ ಅವರು ವಿಮಾನದ ನಿಲ್ದಾಣ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಟ್ರೂಜೆಟ್ ಸಿಇಒ ಮೂರ್ತಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗವಾರ್, ಬೀದರ್​ ಸಹಾಯಕ ಆಯುಕ್ತರಾದ ಅಕ್ಷಯ್ ಶ್ರೀಧರ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಪ್ರಶಾಂತ. ಪಿಆರ್, ನಗರಸಭೆ, ಕೆಎಸ್‍ಐಐಡಿಸಿ ಅಧಿಕಾರಿಗಳು ಉಪಸ್ಥಿತರಿದ್ದರು.

ABOUT THE AUTHOR

...view details