ಕರ್ನಾಟಕ

karnataka

ETV Bharat / state

ಕಾಂಗ್ರೆಸ್​​ನವರು ಜನರ ದಾರಿ ತಪ್ಪಿಸುತ್ತಿದ್ದಾರೆ: ಸಚಿವ ಪ್ರಭು ಚವ್ಹಾಣ - Minister Prabhu Chavana

ಕಾಂಗ್ರೆಸ್​​ನವರು ಸರ್ಕಾರದ ವಿರುದ್ಧ ಸುಳ್ಳು ಸುಳ್ಳು ಆರೋಪಗಳನ್ನು ಮಾಡಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ತಿರುಗೇಟು ನೀಡಿದ್ದಾರೆ.

Minister
ಸಚಿವ ಪ್ರಭು ಚವ್ಹಾಣ

By

Published : Jul 25, 2020, 11:14 PM IST

ಬೀದರ್: ಕಾಂಗ್ರೆಸ್​​ನವರು ಸರ್ಕಾರದ ವಿರುದ್ಧ ಸುಳ್ಳು ಸುಳ್ಳು ಆರೋಪಗಳನ್ನು ಮಾಡಿ ಜನರಿಗೆ ದಿಶಾಭೂಲ್ (ದಾರಿ ತಪ್ಪಿಸುವ ಕೆಲಸ) ಮಾಡುತ್ತಿದ್ದಾರೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ತಿರುಗೇಟು ನೀಡಿದ್ದಾರೆ.

ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ

ನಗರದಲ್ಲಿ ರಾಜ್ಯ ಸರ್ಕಾರದ ಒಂದು ವರ್ಷದ ಸಾಧನೆಗಳ ಕುರಿತು ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರು, ಅವರಿಗೆ ಮಾಡಲು ಬೇರೆ ಕೆಲಸ ಇಲ್ಲ. ಹೀಗಾಗಿ ಸರ್ಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಕೋವಿಡ್-19 ಚಿಕಿತ್ಸೆಯಲ್ಲಿ ಗೋಲ್​ಮಾಲ್ ನಡೆದಿದೆ ಎಂಬ ಆರೋಪಕ್ಕೆ ಸಚಿವ ಪ್ರಭು ಚವ್ಹಾಣ ಪ್ರತಿಕ್ರಿಯಿಸಿದ್ದಾರೆ.

ಸಿದ್ದರಾಮಯ್ಯ ಸುಳ್ಳು ಮಾಹಿತಿ ಎಲ್ಲಿಂದ ಕಲೆಕ್ಟ್ ಮಾಡ್ತಾರೋ ಗೊತ್ತಿಲ್ಲ. ಅವರ ಹೇಳಿಕೆಯಲ್ಲಿ ಯಾವುದೇ ಸತ್ಯವಿಲ್ಲ. ಕಾಂಗ್ರೆಸ್​​ನವರು ಮಾಡಿದ ಆರೋಪಕ್ಕೆ ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ ಬಹಿರಂಗವಾಗಿಯೇ ಲೆಕ್ಕ ಕೊಟ್ಟಿದ್ದಾರೆ ಎಂದರು.

ಈ ವೇಳೆಯಲ್ಲಿ ಪರಿಷತ್ ಸದಸ್ಯ ರಘುನಾಥ್ ರಾವ್ ಮಲ್ಕಾಪೂರೆ, ಬಿಜೆಪಿ ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ, ಮುಖಂಡರಾದ ಈಶ್ವರಸಿಂಗ್ ಠಾಕೂರ್, ಅಶೋಕ ಹೊಕ್ರಾಣೆ, ಅರಿಹಂತ ಸಾವಳೆ ಹಾಗೂ ಬಸವರಾಜ ಜೋಜನಾ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ABOUT THE AUTHOR

...view details