ಬೀದರ್ :ಕೊರೊನಾ ನಿಯಂತ್ರಣಕ್ಕೆ ಲಾಕ್ಡೌನ್ ಅಷ್ಟೇ ಪರಿಹಾರವಲ್ಲ.. ಹೀಗಾಗಿ ಜಿಲ್ಲೆಯ ಜನಪ್ರತಿನಿಧಿಗಳು, ಪ್ರಜ್ಞಾವಂತರ ಸಲಹೆ ಪಡೆದು ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚೌಹಾಣ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ವಿಡಿಯೋ ಸಂವಾದ ಕಾರ್ಯಕ್ರಮದ ನಂತರ ಸುದ್ದಿಗೊಷ್ಠಿ ನಡೆಸಿ ಅವರು ಮಾತನಾಡಿದರು.
ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಮಹಾರಾಷ್ಟ್ರ ಹಾಗೂ ತೆಲಂಗಾಣದಿಂದ ಸಾಕಷ್ಟು ಜನರು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಇದರಿಂದ ಸೋಂಕು ಹೆಚ್ಚಾಗುತ್ತಿದೆ. ಜಿಲ್ಲೆಯ ಸಮಗ್ರ ಪರಿಸ್ಥಿತಿಯನ್ನ ಸಿಎಂ ಬಿಎಸ್ವೈ ಅವರ ಗಮನಕ್ಕೆ ತರಲಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಕೊರೊನಾ ಪರಿಸ್ಥಿತಿ ನಿಭಾಯಿಸಲು ಲಾಕ್ಡೌನ್ ಅಳವಡಿಕೆ ಕುರಿತು ಜನಪ್ರತಿನಿಧಿಗಳು, ಪ್ರಜ್ಞಾವಂತರು ಹಾಗೂ ಅಧಿಕಾರಿಗಳೊಂದಿಗೆ ಸಮಗ್ರ ಚರ್ಚೆ ನಡೆಸಿ ನಿರ್ಧರಿಸಲಾಗುವುದು ಎಂದರು.