ಬೀದರ್:ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ಅವರ ಬೆಂಗಾವಲು ಕಾರು ಪಲ್ಟಿಯಾಗಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಸಚಿವ ಪ್ರಭು ಚವ್ಹಾಣ ಬೆಂಗಾವಲು ವಾಹನ ಪಲ್ಟಿ: ಚಾಲಕನಿಗೆ ಸಣ್ಣ ಪುಟ್ಟ ಗಾಯ - ಸಚಿವ ಪ್ರಭು ಚವ್ಹಾಣ ಅವರ ಕಾರು ಪಲ್ಟಿ
ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ಅವರ ಬೆಂಗಾವಲು ಕಾರು ಪಲ್ಟಿಯಾಗಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಬೀದರ್ ನಿಂದ ಹೈದರಾಬಾದ್ ವಿಮಾನ ನಿಲ್ದಾಣಕ್ಕೆ ಹೋಗುವಾಗ ತೆಲಂಗಾಣದ ಜಹಿರಾಬಾದ್ ಬಳಿ ರಸ್ತೆ ಅಪಘಾತ ನಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ಚಾಲಕ ಸಂಜೀವಕುಮಾರ್ಗೆ ಸಣ್ಣ ಪುಟ್ಟ ಗಾಯವಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಸಚಿವ ಪ್ರಭು ಚವ್ಹಾಣ ಅವರ ಫಾರ್ಚ್ಯೂನರ್ ಕಾರನ್ನು ಈ ಕಾರು ಹಿಂಬಾಲಿಸಿ ಹೊಗುತ್ತಿದ್ದ ವೇಳೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎನ್ನಲಾಗಿದೆ. ಕಾರಿನಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ರೀತಿಯ ಅವಘಢ ಸಂಭವಿಸಿಲ್ಲ. ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು ಜಹಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.