ಕರ್ನಾಟಕ

karnataka

ETV Bharat / state

7 ದಶಕಗಳ ನಂತರ ಸೇತುವೆ ನಿರ್ಮಾಣ: ಕಾಮಗಾರಿ ವೀಕ್ಷಿಸಿದ ಶಾಸಕ ನಾರಾಯಣ ರಾವ್ - ಬಸವಕಲ್ಯಾಣ ಶಾಸಕ ನಾರಾಯಣರಾವ್ ಸುದ್ದಿ

ತಾಲೂಕಿನ ಜಾಜಾನಮುಗಳಿ ಬಳಿ ಲೋಕೋಪಯೋಗಿ ಇಲಾಖೆಯಿಂದ 1.75 ಕೋಟಿ ವೆಚ್ಚದಲ್ಲಿ ನಡೆಯುತ್ತಿರುವ ಬಾಕ್ಸ್ ಟೈಪ್ ಸೇತುವೆ ಕಾಮಗಾರಿಯನ್ನು ವೀಕ್ಷಿಸಿದ ಶಾಸಕ ನಾರಾಯಣ ರಾವ್​, ಇಲ್ಲಿ ಸೇತುವೆ ನಿರ್ಮಾಣವಾಗಬೇಕು ಎಂದು 70 ವರ್ಷಗಳ ಬೇಡಿಕೆಯಾಗಿತ್ತು. ಈಗ ಕೆಲಸ ಆರಂಭವಾಗಿದ್ದು, ಆದಷ್ಟು ಬೇಗ ಕೆಲಸ ಪೂರ್ಣಗೊಳಿಸಿ ಜನರಿಗೆ ಅನಕೂಲ ಕಲ್ಪಿಸಿಕೊಡಬೇಕು ಎಂದು ಸಲಹೆ ನೀಡಿದ್ರು.

7 ದಶಕಗಳ ನಂತರ ಸೇತುವೆ ನಿರ್ಮಾಣ
7 ದಶಕಗಳ ನಂತರ ಸೇತುವೆ ನಿರ್ಮಾಣ

By

Published : Jun 10, 2020, 11:43 AM IST

ಬಸವಕಲ್ಯಾಣ: ಅಭಿವೃದ್ಧಿ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡುವ ಜತೆಗೆ ಕಾಮಗಾರಿಗೆ ವೇಗ ನೀಡಿ ನಿಗದಿತ ಸಮಯದಲ್ಲಿ ಕೆಲಸ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಶಾಸಕ ನಾರಾಯಣ ರಾವ್ ಸೂಚಿಸಿದರು.

ತಾಲೂಕಿನ ಜಾಜಾನಮುಗಳಿ ಬಳಿ ಲೋಕೋಪಯೋಗಿ ಇಲಾಖೆಯಿಂದ 1.75 ಕೋಟಿ ವೆಚ್ಚದಲ್ಲಿ ನಡೆಯುತ್ತಿರುವ ಬಾಕ್ಸ್ ಟೈಪ್ ಸೇತುವೆ ಕಾಮಗಾರಿಯನ್ನು ವಿಕ್ಷಿಸಿದ ಅವರು, ಇಲ್ಲಿ ಸೇತುವೆ ನಿರ್ಮಾಣವಾಗಬೇಕು ಎಂಬುದು 70 ವರ್ಷಗಳ ಬೇಡಿಕೆಯಾಗಿತ್ತು. ಈಗ ಕೆಲಸ ಆರಂಭವಾಗಿದ್ದು, ಆದಷ್ಟು ಬೇಗ ಕೆಲಸ ಪೂರ್ಣಗೊಳಿಸಿ ಜನರಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಸಲಹೆ ನೀಡಿದರು.

7 ದಶಕಗಳ ನಂತರ ಆರಂಭವಾಗಿರುವ ಸೇತುವೆ ನಿರ್ಮಾಣ ಕಾಮಗಾರಿ ವೀಕ್ಷಿಸಿದ ಶಾಸಕ

ನಗರ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ರಸ್ತೆ, ಹೊಸ ಕೆರೆಗಳ ನಿರ್ಮಾಣ, ಹಳೆ ಕೆರೆಗಳ ಪುನಶ್ಚೇತನಕ್ಕೆ ಆದ್ಯತೆ ನೀಡಲಾಗುತ್ತಿದೆ. ಕೆರೆಗಳ ನಿರ್ಮಾಣದಿಂದ ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಪೂರಕವಾಗಿ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. ತಾಲೂಕಿನಲ್ಲಿ ಶಾಲೆಗಳಿಗೆ ಹೊಸ ಕೋಣೆ, ಕಂಪೌಂಡ್ ಸೇರಿದಂತೆ ಅಗತ್ಯ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಭವಿಷ್ಯದ ದೃಷ್ಠಿಯಿಂದ ಮನುಷ್ಯನ ನೆಮ್ಮದಿಯ ಬದುಕಿಗೆ ಪರಿಸರ ಸಂರಕ್ಷಣೆ ಅಗತ್ಯವಾಗಿದೆ. ತಾಲೂಕಿನಲ್ಲಿ ಈ ಮಳೆಗಾಲದಲ್ಲಿ ಒಂದು ಲಕ್ಷ ಸಸಿಗಳನ್ನು ನೆಡುವ ಗುರಿ ಹೊಂದಲಾಗಿದೆ. ಕಚೇರಿ, ಶಾಲಾ ಆವರಣಗಳಲ್ಲಿ ಸಸಿಗಳನ್ನು ನೆಡುವ ಮೂಲಕ ಹಸಿರಿನಿಂದ ಕೂಡಿದ ಪರಿಸರ ನಿರ್ಮಾಣಕ್ಕೆ ಪ್ರಯತ್ನಿಸಬೇಕಿದೆ. ಪರಿಸರ ಸಂರಕ್ಷಣೆಗಾಗಿ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಕೆಲಸ ಶಾಲೆಗಳಲ್ಲಿ ನಡೆಯಬೇಕು ಎಂದು ಶಾಸಕರು ಹೇಳಿದರು.

ಜಾಜಾನಮುಗಳಿ ಬಳಿ ಸೇತುವೆ ನಿರ್ಮಾಣವಾಗಬೇಕು ಎನ್ನುವುದು ಇಲ್ಲಿಯ ಜನರ ಬಹುದಿನಗಳ ಬೇಡಿಕೆಯಾಗಿತ್ತು. ಆದರೆ ಇದುವರೆಗೆ ಕೆಲಸ ಆಗಿರಲಿಲ್ಲ. ಮಳೆಗಾಲದಲ್ಲಿ ಈ ಭಾಗದ ಜನರು ತೀವ್ರ ಸಮಸ್ಯೆ ಎದುರಿಸಬೇಕಾಗುತ್ತಿತ್ತು. ಆದರೆ ಈಗ ಶಾಸಕರ ಆಸಕ್ತಿ ಮತ್ತು ಕಾಳಜಿಯಿಂದಾಗಿ ಕೆಲಸ ಆರಂಭವಾಗಿರುವುದು ಖುಷಿ ತಂದಿದೆ ಎಂದು ಸ್ಥಳದಲ್ಲಿದ್ದ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದರು.

ABOUT THE AUTHOR

...view details