ಹಳ್ಳಿಖೇಡ(ಬೀದರ್): ಹೊಸದಾಗಿ ರಚನೆಯಾದ ಹಳ್ಳಿಖೇಡ ಪಟ್ಟಣ ಪಂಚಾಯ್ತಿ ವ್ಯಾಪ್ತಿಯ ವಿವಿಧ ಬಡಾವಣೆಗಳಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಯಿತು. ರಸ್ತೆ ಹಾಗೂ ಒಳ ಚರಂಡಿ ನಿರ್ಮಾಣಕ್ಕಾಗಿ ನಗರೋತ್ಥಾನ ಯೋಜನೆ ಅಡಿಯಲ್ಲಿ 8.50 ಕೋಟಿ ರುಪಾಯಿ ವೆಚ್ಚದ ಕೆಲಸಕ್ಕೆ ಶಾಸಕ ರಾಜಶೇಖರ್ ಪಾಟೀಲ್ ಚಾಲನೆ ನೀಡಿದರು.
8.50 ಕೋಟಿ ರೂ. ವೆಚ್ಚದ ನಗರೋತ್ಥಾನ ಕಾಮಗಾರಿಗೆ ಶಾಸಕ ಪಾಟೀಲ್ ಚಾಲನೆ
ಗುಣಮಟ್ಟದ ಕಾಮಗಾರಿ ಹಾಗೂ ನಿಗದಿತ ಅವಧಿಯಲ್ಲಿ ಕಾಮಗಾರಿ ಮುಗಿಸುವಂತೆ ಗುತ್ತಿಗೆದಾರರು ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಜಿಲ್ಲೆಯ ಹುಮನಾಬಾದ್ ತಾಲೂಕಿನ ಹಳ್ಳಿಖೇಡ ಪಟ್ಟಣದಲ್ಲಿ ಬಹು ನಿರೀಕ್ಷಿತ ಒಳ ಚರಂಡಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಗುಣಮಟ್ಟದ ಕಾಮಗಾರಿ ಹಾಗೂ ನಿಗದಿತ ಅವಧಿಯಲ್ಲಿ ಕಾಮಗಾರಿ ಮುಗಿಸುವಂತೆ ಗುತ್ತಿಗೆದಾರರು ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೆ ನೂತನ ಪಟ್ಟಣ ಪಂಚಾಯ್ತಿ ಕಟ್ಟಡ, ಕಾರಂಜಾ ಬಡಾವಣೆಯಲ್ಲಿ ಜನರು ತಗಡಿನ ಶೇಡ್ಗಳಲ್ಲಿ ವಾಸ ಮಾಡ್ತಿದ್ದು, ಅವರಿಗೆ ಸೂಕ್ತ ಸೌಲಭ್ಯ ಒದಗಿಸಬೇಕು. ಜತೆಗೆ ಎಲ್ಲ ನಿವಾಸಿಗರ ಆಸ್ತಿ ದಾಖಲೆ ಸೇರಿದಂತೆ ಮೂಲ ಸೌಲಭ್ಯಗಳು ಒದಗಿಸಬೇಕು ಎಂದು ಸಲಹೆ ನೀಡಿದರು.
ಈ ವೇಳೆಯಲ್ಲಿ ವಿಧಾನ ಪರಿಷತ್ ಸದಸ್ಯ ಅರವಿಂದ ಅರಳಿ, ಜಿ.ಪಂ ಉಪಾಧ್ಯಕ್ಷ ಲಕ್ಷ್ಮಣರಾವ್ ಬುಳ್ಳಾ, ತಾ.ಪಂ ಅಧ್ಯಕ್ಷ ರಮೇಶ ಡಾಕುಳಗಿ, ಮುಖಂಡರಾದ ಕಂಟೆಪ್ಪಾ ದಾನಾ, ಅಫ್ಸರಮಿಯ್ಯಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.