ಕರ್ನಾಟಕ

karnataka

ETV Bharat / state

ಬಸವಕಲ್ಯಾಣದಲ್ಲಿ ನಾರಾಯಣರಾವ್ ಅಂತ್ಯಕ್ರಿಯೆ: 50 ಜನರಿಗೆ ಮಾತ್ರ ಅವಕಾಶ

ಬಸವಕಲ್ಯಾಣ ನಗರದಲ್ಲಿ ನಿಯೋಜಿತ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಸಾಮಾಜಿಕ ಅಂತರ ಕಾಪಾಡಿಕೊಂಡು ನೆರವೇರಿಸಲಾಗುತ್ತದೆ. ಮೃತರ ಕುಟುಂಬಸ್ಥರು, ಗಣ್ಯರು ಸೇರಿದಂತೆ ಗರಿಷ್ಠ 50 ಜನರಿಗೆ ಮಾತ್ರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ.

By

Published : Sep 25, 2020, 3:49 AM IST

narayanarao
ನಾರಾಯಣರಾವ್

ಬೀದರ್/ಬೆಂಗಳೂರು: ಶಾಸಕ ಬಿ.ನಾರಾಯಣರಾವ್ ಅವರ ಅಂತ್ಯಕ್ರಿಯೆ ಶುಕ್ರವಾರ (ಸೆ. 25) ಮಧ್ಯಾಹ್ನ ಬಸವಕಲ್ಯಾಣದಲ್ಲಿ ನಡೆಯಲಿದ್ದು, ಅಂತ್ಯಕ್ರಿಯೆಗೆ ಗರಿಷ್ಠ 50 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಆರ್​ ರಾಮಚಂದ್ರನ್ ತಿಳಿಸಿದ್ದಾರೆ.

ಬಸವಕಲ್ಯಾಣ ನಗರದಲ್ಲಿ ನಿಯೋಜಿತ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಸಾಮಾಜಿಕ ಅಂತರ ಕಾಪಾಡಿಕೊಂಡು ಕನಿಷ್ಠ ಪೊಲೀಸ್ ಸಿಬ್ಬಂದಿ ನಿಯೋಜಿಸಸಲಾಗುತ್ತದೆ. ಮೃತರ ಕುಟುಂಬಸ್ಥರು, ಗಣ್ಯರು ಸೇರಿದಂತೆ ಗರಿಷ್ಠ 50 ಜನರಿಗೆ ಮಾತ್ರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಅವಕಾಶ ಮಾಡಿಕೊಡಲಾಗುತ್ತದೆ ಎಂದು 'ಈಟಿವಿ ಭಾರತ'ಗೆ ತಿಳಿಸಿದ್ದಾರೆ.

ಬೆಂಗಳೂರು ಆಸ್ಪತ್ರೆಯ ಹೊರಭಾಗ

ಕೊವಿಡ್-19ರ ಸರ್ಕಾರಿ ಮಾರ್ಗಸೂಚಿಗಳನ್ನು ಪಾಲಿಸಿ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗುವುದು. ಈ ಕಾರಣ ಸಾರ್ವಜನಿಕರು ಮನೆಯಲ್ಲಿಯೆ ಇದ್ದು ಸಂತಾಪ ವ್ಯಕ್ತಪಡಿಸಿ ಸಹಕರಿಸಲು ಜಿಲ್ಲಾಧಿಕಾರಿಗಳು ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.

ಡಿಸಿ ಪ್ರಕಟಣೆ

ಅಂತ್ಯಕ್ರಿಯೆ ನಡೆಯಲಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕೊರೊನಾ ಮಾರ್ಗಸೂಚಿ ಪ್ರಕಾರ ಅಂತ್ಯಕ್ರಿಯೆ ನಡೆಸಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಳ್ಳುತ್ತಿದೆ. ಕುಟುಂಬ ಸದಸ್ಯರನ್ನು ಹೊರತುಪಡಿಸಿ ಸಾರ್ವಜನಿಕರಿಗೆ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಅವಕಾಶವಿಲ್ಲ. ಹೀಗಾಗಿ, ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ.

ABOUT THE AUTHOR

...view details