ಕರ್ನಾಟಕ

karnataka

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ಪಾತ್ರ ಮಹತ್ವದ್ದು: ಎ.ಸಿ.ಭಂವರಸಿಂಗ್ ಮೀನಾ

By

Published : Jan 26, 2020, 3:02 AM IST

ರಾಷ್ಟ್ರೀಯ ಮತದಾರ ದಿನಾಚರಣೆ ನಿಮಿತ್ತ ಬೀದರ್​ ಜಿಲ್ಲೆ ಬಸವಕಲ್ಯಾಣ ತಾಲೂಕು ಆಡಳಿತದಿಂದ ನಗರದ ರಥ ಮೈದಾನದ ಸಭಾಭವನದಲ್ಲಿ ರಾಷ್ಟ್ರೀಯ ಮತದಾರ ದಿನಾಚರಣೆ ಮತ್ತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.

National Voter Day in Basavakalyana
ರಾಷ್ಟ್ರೀಯ ಮತದಾರ ದಿನಾಚರಣೆ ನಡೆಯಿತು

ಬಸವಕಲ್ಯಾಣ:ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ಗಟ್ಟಿಗೊಳಿಸಬೇಕು ಎಂದು ಸಹಾಯಕ ಆಯುಕ್ತ ಭಂವರಸಿಂಗ್ ಮೀನಾ ಸಲಹೆ ನೀಡಿದರು.

ರಾಷ್ಟ್ರೀಯ ಮತದಾರ ದಿನಾಚರಣೆ ನಡೆಯಿತು

ರಾಷ್ಟ್ರೀಯ ಮತದಾರ ದಿನಾಚರಣೆ ನಿಮಿತ್ತ ತಾಲೂಕು ಆಡಳಿತದಿಂದ ನಗರದ ರಥ ಮೈದಾನದ ಸಭಾಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಆಸೆ, ಆಮಿಷಗಳಿಗೆ ಒಳಗಾಗದೆ ಮತದಾನ ಮಾಡುವ ಮೂಲಕ ಮತದಾನದ ಘನತೆ ಕಾಪಾಡಬೇಕು ಎಂದರು.

ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಪ್ರತಿಭಾ ಕುಲ್ಕರ್ಣಿ, ಸಿವಿಲ್ ನ್ಯಾಯಧಿಶರಾದ ರಾಘವೇಂದ್ರ ಉಪಾಧ್ಯಾಯ, ಸಿವಿಲ್ ನ್ಯಾಯಾಧೀಶರಾದ ಬಿ.ಪಿ. ಚಂದ್ರಯ್ಯ ಉಪಸ್ಥಿತರಿದ್ದರು.

ಉಪನ್ಯಾಸಕ ಡಾ.ಚಿತ್ರಶೇಖರ ಚಿರಳ್ಳಿ ವಿಶೇಷ ಉಪನ್ಯಾಸ ನೀಡಿದರು. ಪೌರಾಯುಕ್ತ ಸುರೇಶ ಬಬಲಾದ ಸ್ವಾಗತಿಸಿದರು. ತಹಶೀಲ್ದಾರ್​ ಸಾವಿತ್ರಿ ಸಲಗರ್ ಪ್ರತಿಜ್ಞಾವಿಧಿ ಬೋಧಿಸಿದರು. ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ಪ್ರಥಮ, ದ್ವೀತಿಯ ಹಾಗೂ ತೃತಿಯ ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು. ಮೈಸಲಗಾ ಗ್ರಾಮದ ಶಿಕ್ಷಕ ಶಿವಪ್ಪ ಪಾಟೀಲರಿಗೆ ಉತ್ತಮ ಬಿಎಲ್‌ಓ ಎಂದು ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ABOUT THE AUTHOR

...view details